ಉಡುಪಿ: ಸಂಬಂಧಿ ಮಹಿಳೆಯೊಬ್ಬರ ಜೀವ ಉಳಿಸಲು ಹೋಗಿ ಸಣ್ಣ ಪ್ರಾಯದ ಶಿಕ್ಷಕಿಯೊಬ್ಬರು ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.
ಮೃತ ಶಿಕ್ಷಕಿಯನ್ನು ಕುಂದಾಪುರ ತಾಲೂಕಿನ ಕೊಟೇಶ್ವರದ ಅರ್ಚನಾ ಕಾಮತ್ (34) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಕಾಲೇಜುವೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ, ಪರೋಪಕಾರಿಯಾಗಿದ್ದರು.
ತನ್ನ ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದರು. ಅದರಂತೆ ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಅರ್ಚನಾ ದಾಖಲಾಗಿದ್ದರು. ಈ ವೇಳೆ ಸೋಂಕಿಗೆ ತುತ್ತಾಗಿ ತನ್ನ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ. ಅರ್ಚನಾ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.