ಬೆಂಗಳೂರು: 22 ವರ್ಷದ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಸಂಬಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಹಾಸನದ ಮೃತ ಅರುಣ್ ಸಿ, ಕಳೆದ ಜುಲೈ 11 ರಂದು ತನ್ನ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ವಿದ್ಯಾರ್ಥಿಯಾಗಿದ್ದ ಅರುಣ್, ಎಂಟನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ರಜೆಗಾಗಿ ಮನೆಗೆ ಹೋಗಿದ್ದ ವೇಳೆ ಆತ್ಮಹತ್ಯೆ ಶರಣಾಗಿದ್ದಾನೆ.
ಪೊಲೀಸರು ಡೆತ್ ನೋಟ್ ಅನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಅರುಣ್, ಯಾರ ಹೆಸರನ್ನೂ ಬರೆದಿಲ್ಲ ಮತ್ತು ಆತ್ಮಹತ್ಯೆಗೆ ಕಾರಣ ಸಹ ನೀಡಿಲ್ಲ.
ಆರಂಭದಲ್ಲಿ ಇದನ್ನು "ಅಸ್ವಾಭಾವಿಕ ಸಾವು" ಪ್ರಕರಣ ಎಂದು ದಾಖಲಿಸಲಾಗಿತ್ತು. ಆದರೆ, ಅರುಣ್ ಪೋಷಕರು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಕಾಲೇಜಿನ ವಾಟ್ಸಾಪ್ ಗ್ರೂಪ್‌ನಲ್ಲಿ ಅವರ ಮೂವರು ಕ್ಲಾಸ್ ಮೇಟ್ ಗಳು ತಮ್ಮ ಮಗನಿಗೆ "ಕಿರುಕುಳ" ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ "ಕಿರುಕುಳ" ತಮ್ಮ ಮಗನ ಸಾವಿಗೆ ಕಾರಣವಾಯಿತು ಎಂದು ಅವರು ದೂರಿದ್ದಾರೆ.
ಮೂವರು ಕ್ಲಾಸ್ ಮೇಟ್ ಗಳು ಅರುಣ್‌ಗೆ ಒಂದು ವರ್ಷಕ್ಕೂ ಹೆಚ್ಚು ಕಾಲ "ಮಾನಸಿಕ ಕಿರುಕುಳ ನೀಡಿದ್ದಾರೆ ಮತ್ತು ಅವಮಾನ" ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಅರುಣ್ ವಿಡಿಯೋ ರೆಕಾರ್ಡ್ ಮಾಡಿ ಅದರಲ್ಲಿ ತನ್ನ ದುಃಖವನ್ನು ಹೇಳಿಕೊಂಡಿದ್ದು, ಅದನ್ನು ಸಾವಿಗೆ ಸ್ವಲ್ಪ ಮೊದಲು ತರಗತಿಯ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
"ದೂರಿನ ಆಧಾರದ ಮೇಲೆ, ನಾವು ಮೂವರು ವಿದ್ಯಾರ್ಥಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು 3(5) (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ.