ಜಮೀರನ್ನೇ ಟಾರ್ಗೆಟ್ ಮಾಡ್ತಿದ್ದಾರಾ..?

ಶನಿವಾರ, 6 ಆಗಸ್ಟ್ 2022 (16:13 IST)
ಇತ್ತೀಚೆಗೆ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ರು. ಈಗ ಸಮನ್ಸ್ ಮುಖಾಂತರ ಎಸಿಬಿ ಅಧಿಕಾರಿಗಳು ದಾಖಲೆಗಳು ಕೇಳಿದಾರೆ.ದಾಖಲೆಗಳನ್ನ ಸಲ್ಲಿಕೆ ಮಾಡಿದ್ದೇನೆ.ಮನೆ ನಿರ್ಮಾಣ ಸಂಬಂಧ ದಾಖಲೆಗಳನ್ನ ಕೊಟ್ಟಿದ್ದೇನೆ.ಬಿಜೆಪಿ ಸರ್ಕಾರ ಇರೋಕಡೆಯಲ್ಲಿ ಹೀಗೆ ಆಗ್ತಿದೆ.ನಾನು ನಮ್ಮ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರನ್ನೇ  ಟಾರ್ಗೆಟ್ ಮಾಡ್ತಿದ್ದಾರೆ ಎಂದು ಜಮೀರ್ ಅಸಾಮಾಧಾನ ಹೊರಹಾಕಿದ್ದಾರೆ.
 
ಇನ್ನು ಎಸಿಬಿಯವರು ಏನೇನು ಕೇಳಿದ್ದಾರೆ ಅದೆಲ್ಲವನ್ನೂ ಕೊಟ್ಟಿದ್ದೇನೆ.ದೇಶದಲ್ಲಿ ಇವತ್ತು ಬಿಜೆಪಿಯವರು ಯಾರು ಮನೆ ಕಟ್ಟಿಲ್ಲ, ಆಸ್ತಿ ಮಾಡಿಲ್ಲ ಅಂತಾ ಜಮೀರ್ ಪ್ರಶ್ನೆ ಮಾಡಿದ್ದಾರೆ.ಅಷ್ಟೇ ಅಲ್ಲದೇ  ನಮ್ಮನ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಜಮೀರ್ ಕಿಡಿಕಾರಿದ್ದಾರೆ. ಇನ್ನು ಎಸಿಬಿ ಅಧಿಕಾರಿಗಳು ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ.ನಾನು ಸ್ಪಂದಿಸುತ್ತೇನೆ ಎಂದು ಶಾಸಕ‌ ಜಮೀರ್ ಅಹ್ಮದ್ ಖಾನ್ ಹೇಳಿದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ