ಗಜಪಡೆಯಲ್ಲಿ ಅರ್ಜುನ, ಭೀಮ ಬಲಶಾಲಿಗಳು !
ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಮಾಜಿ ಕ್ಯಾಪ್ಟನ್ ಅರ್ಜುನ ಅತಿ ಹೆಚ್ಚು ತೂಕದ ಆನೆ ಎಂಬ ಹೆಸರನ್ನು ಈ ಬಾರಿಯೂ ಉಳಿಸಿಕೊಂಡಿದ್ದಾನೆ. ತೂಕ ಹೆಚ್ಚಿಸಿಕೊಳ್ಳುವ ವಿಷಯದಲ್ಲಿ ಭೀಮ ಈ ಬಾರಿಯೂ ಎಲ್ಲರಿಗಿಂತ ಮುಂದಿದ್ದಾನೆ. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಅರಮನೆಯಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆ ನಿತ್ಯವೂ ತಾಲೀಮು ನಡೆಸುತ್ತಿವೆ. ಇಂದು ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು. ಒಟ್ಟು 14 ಆನೆಗಳು ಪೊಲೀಸರ ಬಿಗಿ ಭದ್ರತೆಯಲ್ಲಿ ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರಕ್ಕೆ ಆಗಮಿಸಿ ತೂಕ ಪರೀಕ್ಷೆಯಲ್ಲಿ ಭಾಗಿಯಾದವು. ಎರಡನೇ ಹಂತದ ಆನೆಗಳ ಜೊತೆ ಮೊದಲನೇ ಹಂತದ ಆನೆಗಳಿಗೂ ತೂಕ ಪರೀಕ್ಷೆ ಮಾಡಲಾಗಿದೆ.