ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ: ಕಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿದ ಬಿಜೆಪಿ

ಸೋಮವಾರ, 2 ಮಾರ್ಚ್ 2015 (12:13 IST)
ಸರ್ಕಾರವನ್ನು ಮತ್ತೆ ಪೇಚಿಗೆ ಸಿಲುಕಿಸಲು ಬಿಜೆಪಿ ಮುಂದಾಗಿದ್ದು, ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಮೂರ್ತಿ ಕೆಂಪಣ್ಣ ಆಯೋಗಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದಾರೆ. 
 
ಬೆಂಗಳೂರಿನ ಜಲ ಮಂಡಳಿಯಲ್ಲಿರುವ ಆಯೋಗದ ಕೇರಿಗೆ ಭೇಟಿ ನೀಡಿದ್ದ ಬಿಜೆಪಿ ಪರ ವಕೀಲರಾದ ನಟರಾಜ್ ಶರ್ಮಾ ಹಾಗೂ ದೊರೈ ರಾಜ್ ಅವರು ಬಿಜೆಪಿ ಪಕ್ಷದ ಪರವಾಗಿ ದಾಖಲೆಗಳನ್ನು ಸಲ್ಲಿಸಿದ್ದು, ಮುಖ್ಯಮಂತ್ರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅನುವಾಗುವಂತೆ ಸೂಕ್ತವಾಗಿ ಪರೀಶೀಲಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 
 
ಇನ್ನು ಕೆಲ ದಿನಗಳ ಹಿಂದೆ ಬಿಜೆಪಿ ನಿಯೋಗವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಅನುಮತಿ ಪಡೆದು ಮುಖ್ಯಮಂತ್ರಿಗಳ ವಿರುದ್ಧ ದಾವೆ ಹೂಡಲು ಯತ್ನಿಸುತ್ತಿದ್ದರು. ಆದರೆ ರಾಜ್ಯಪಾಲರು ಅನುಮತಿ ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ನೇರವಾಗಿ ನಿಯೋಗಕ್ಕೆ ಭೇಟಿ ನೀಡಿರುವ ರಾಜ್ಯ ಬಿಜೆಪಿ ಘಟಕದ ನಿಯೋಗ, ಪ್ರಕರಣದ ಎಲ್ಲಾ ಧಕಲೆಗಳನ್ನು ಸಲ್ಲಿಸಿದೆ.
 
ಇನ್ನು ಬಿಜೆಪಿಯ ವಿಧಾನಸಭಾ ನಾಯಕ ಜಗದೇಶ್ ಶೆಟ್ಟರ್ ಅವರು, ಸಿಎಂ ಸಿದ್ದರಾಮಯ್ಯನವರು ತಮ್ಮ ಅಧಿಕಾರಾವಧಿಯಲ್ಲಿ ಸುಮಾರು 702 ಎಕರೆ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಿದ್ದು, ಇದರಲ್ಲಿ 420 ಎಕರೆ ಡಿನೋಟಿಫಿಕೇಶನ್ ಮಾಡಿದ್ದಾರೆ.  ಅಲ್ಲದೆ ಸಿಎಂ ಅವರ ಈ ನಡವಳಿಕೆಯಿಂದ ಸರ್ಕಾರಕ್ಕೆ 16 ಸಾವಿರ ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು. 

ವೆಬ್ದುನಿಯಾವನ್ನು ಓದಿ