ಬಸವನಗುಡಿ ಕಡಲೆಕಾಯಿ ಪರಿಷೆಗೆ ವ್ಯವಸ್ಥೆ‌

ಶುಕ್ರವಾರ, 26 ನವೆಂಬರ್ 2021 (21:25 IST)
ದಿನಾಂಕ: 29-11-2021 ಸೋಮವಾರದಂದು ಬಸವನಗುಡಿಯಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಮುಜರಾಯಿ ಇಲಾಖೆಯಿಂದ ನಡೆಸಲಾಗುತ್ತಿದ್ದು, ಬಸವಣ್ಣ ದೇವಸ್ಥಾನದ ಬ್ಯಾರಿಕೇಡಿಂಗ್, ಶಾಮಿಯಾನ, ಲೈಟಿಂಗ್ಸ್, ಮೊಬೈಲ್ ಟಾಯ್ಲೆಟ್, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ವ್ಯವಸ್ಥೆ ಕಲ್ಪಿಸಲಾಗಿದೆ.
 
ಜನಸಂದಣಿಯನ್ನು ನಿಯಂತ್ರಿಸಲು. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡಲು ಕಾನೂನು ಮತ್ತು ಸುವ್ಯವಸ್ಥೆಗೆ ಪೊಲೀಸ್ ಸಿಬ್ಬಂದಿ ವರ್ಗದವರನ್ನು/ವಾಹನ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಂಚಾರಿ ಪೊಲೀಸ್ ಸಿಬ್ಬಂದಿಯನ್ನು ವಹಿಸಲು ಕ್ರಮ ವಹಿಸಲಾಗಿದೆ.
 
ಮುಂದುವರಿದು, ಯಾವುದೇ ರೀತಿಯ ಅಗ್ನಿ ಆಕಸ್ಮಿಕ ಅವಗಡಗಳು ನಡೆಯದಂತೆ ನಿಯಂತ್ರಿಸಲು ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ತುರ್ತು ವೈದ್ಯಕೀಯ ಶಿಬಿರವನ್ನು ವ್ಯವಸ್ಥೆ ಮಾಡಲಾಗುವುದು. ಸದರಿ ಕಡಲೆಕಾಯಿ ಪರಿಷೆಯಲ್ಲಿ ಬರುವ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವೀಡ್ -19 ತಡೆಗಟ್ಟಲು ಪತ್ರಿಕಾ ಪ್ರಕಟಣೆಯನ್ನು ಕೋರಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ