ಖಾಸಗಿ ವಿಡಿಯೋ ತೋರಿಸಿ ಯುವತಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿ ಅರೆಸ್ಟ್

ಭಾನುವಾರ, 23 ಫೆಬ್ರವರಿ 2020 (12:13 IST)
ಬೆಂಗಳೂರು : ಖಾಸಗಿ ವಿಡಿಯೋ ತೋರಿಸಿ ಯುವತಿಗೆ ಬ್ಲ್ಯಾಕ್ ಮೇಲ್  ಮಾಡುತ್ತಿದ್ದ ಆರೋಪಿಯನ್ನು  ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ.



ದೀಪಕ್ ಬಂಧಿತ ಆರೋಪಿಯಾಗಿದ್ದು, ಈತ ಯುವತಿಯ ಖಾಸಗಿ ವಿಡಿಯೋ ತೋರಿಸಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಒಂದು ವೇಳೆ ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವ ಬೆದರಿಕೆ ಹಾಕಿದ್ದ.


ಈ ಹಿನ್ನಲೆಯಲ್ಲಿ ಯುವತಿ ಈ ಬಗ್ಗೆ ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿ ದೀಪಕ್ ನನ್ನು ಬಂಧಿಸಿದ್ದಾರೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ