ದೇಶದ್ರೋಹಿಗಳನ್ನು ಬಂಧಿಸಲು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯ

ಗುರುವಾರ, 18 ಆಗಸ್ಟ್ 2016 (12:23 IST)
ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ವಿರೋಧಿ ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
 
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ವಲಸಿಗರಿದ್ದಾರೆ. ರಾಜ್ಯದಲ್ಲಿ ದೇಶ ವಿರೋಧಿ ಅಲೆ ಇದೆ. ದೇಶದ್ರೋಹಿಗಳು ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದರೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ಮೌನವಹಿಸಿರುವುದು ಏಕೆ ಎಂದು ಪ್ರಶ್ನಿಸಿದರು.
 
ಬೆಂಗಳೂರಿನ ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜ್‌ನಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಸಂಸ್ಥೆ 'ಬ್ರೋಕನ್ ಫ್ಯಾಮಿಲೀಸ್' ಹೆಸರಿನ ಕಾರ್ಯಾಗಾರ ಆಯೋಜಿಸಿತ್ತು. ಈ ಕಾರ್ಯಾಗಾರದಲ್ಲಿ ಸೇನೆ ಮತ್ತು ಕಾಶ್ಮೀರಿಗಳ ಕುರಿತು ಚರ್ಚೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಕೆಲ ದೇಶದ್ರೋಹಿಗಳು ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ