ಮೈಸೂರು ರೈತರಿಗೆ ಬಂಧನ ಭಾಗ್ಯ

ಶುಕ್ರವಾರ, 17 ನವೆಂಬರ್ 2023 (16:20 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಹಿನ್ನೆಲೆ. ಸಿಎಂ ಸಿದ್ದರಾಮಯ್ಯ ಪ್ರವಾಸ ಸಂದರ್ಭದಲ್ಲಿ ರೈತರು ಪ್ರತಿಭಟನೆ ನಡೆಸುವ ಆತಂಕ ಎದುರಾಗಿದೆ.. ಹಾಗಾಗಿ ರಾತ್ರೋರಾತ್ರಿ ಮೈಸೂರು, ಚಾಮರಾಜನಗರ ಜಿಲ್ಲೆಯ ಹಲವೆಡೆ ರಾತ್ರೋರಾತ್ರಿ ರೈತ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
ಮೈಸೂರು ತಾಲ್ಲೂಕು, ಟಿ ನರಸೀಪುರ ತಾಲ್ಲೂಕು, ನಂಜನಗೂಡು ತಾಲ್ಲೂಕು ಹಾಗು ಚಾಮರಾಜನಗರ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.. ರಾತ್ರೋರಾತ್ರಿ ರೈತ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.. ಬಂಧಿತ ರೈತ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಂದೆ ಅವರ ಜೊತೆ ಮೊಬೈನಲ್ಲಿ ಮಾತನಾಡಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿದ್ದು, ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಕನಕ ವಿದ್ಯಾರ್ಥಿ ನಿಲಯ, ಕಡಲೆ ಮಾರಮ್ಮ ದೇವಸ್ಥಾನ ಉದ್ಘಾಟನೆ ಸೇರಿದಂತೆ ಹಲವು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶುಕ್ರವಾರ ಮತ್ತು ಶನಿವಾರ ಎರಡು ದಿನ ತವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ನಂತರ 2.30ಕ್ಕೆ ಕನಕದಾಸ ಸಾರ್ವಜನಿಕ ವಿದ್ಯಾರ್ಥಿ ನಿಲಯ ಉದ್ಘಾಟಿಸಲಿದ್ದಾರೆ. ಬಳಿಕ  ಕಳಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಡೇಮಾಲಮ್ಮ ದೇವಸ್ಥಾನ ಲೋಕಾರ್ಪಣೆಗೊಳಿಸುತ್ತಾರೆ. ಬಳಿಕ ಮೈಸೂರಿಗೆ ವಾಪಸ್​​ ಆಗುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ