ಮಗಳನ್ನ ಹೊತ್ತೊಯ್ದಿದಲ್ಲದೆ ಮನೆಗಳ ವಸ್ತುಗಳನ್ನೂ ಕದ್ದೊಯ್ದ ಅಳಿಯನ ಬಂಧನ

ಮಂಗಳವಾರ, 21 ನವೆಂಬರ್ 2023 (17:40 IST)
ಒಂದೂವರೆ ವರ್ಷದಿಂದ ಮಗಳನ್ನ ಪ್ರೀತಿಸಿ ಆಕೆಯನ್ನ ಕರೆದುಕೊಂಡು ಓಡಿ ಹೋಗಿದ್ದ.ದೂರು ದಾಖಲಾಗುತ್ತಿದ್ದಂತೆ 'ಮಾವ'ನ ಮನೆ ಅಳಿಯ ಸೇರಿದ್ದ.ಒಂದೂವರೆ ವರ್ಷದ ಬಳಿಕ ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಆರೋಪಿ ಪ್ರದೀಪ್ ಕುಮಾರ್ ನನ್ನ  ಪೊಲೀಸರು ಬಂಧಿಸಿದ್ದಾರೆ. 
 
ಅತ್ತೆ ರೆಜಿನಾ ಕನ್ಯಾಕುಮಾರಿಗೆ ಹೋದ ಸಂದರ್ಭದಲ್ಲಿ ಕಳ್ಳತನ ನಡೆದಿದೆ.ಕಳ್ಳತನ ಮಾಡಿ ಚಿನ್ನಾಭರಣ ತೆಗೆದುಕೊಂಡು ಹೋಗುವಾಗ ಅಕ್ಕ ಪಕ್ಕದ ನಿವಾಸಿಗಳು ನೋಡಿದ್ದರು.ಪ್ರಶ್ನೆ ಮಾಡಿದಾಗ ನಾನು ಇವರ ಸಂಬಂಧಿಕರು ಎಂದು ಹೇಳಿದ್ದ.ಮೊಬೈಲ್ ನಲ್ಲಿ ಫೋಟೋ ತೆಗೆದು ರೆಜಿನಾ ಅವರಿಗೆ ಸ್ಥಳೀಯರು ಕರೆ ಮಾಡಿದ್ದರು.ರೆಜಿನಾ ಅವರ ನಂಬರ್ ನಾಟ್ ರೀಚ್ ಆದ ಹಿನ್ನೆಲೆ ಸಂಪರ್ಕ ಸಾಧ್ಯವಾಗಿರಲಿಲ್ಲ .ನಂತರ ಕನ್ಯಾಕುಮಾರಿಯಿಂದ ವಾಪಾಸ್ ಬಂದಾಗ ಬಾಗಿಲು ಒಡೆದಿತ್ತು.ಅನುಮಾನಗೊಂಡು ನೋಡಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿ ಒಟ್ಟು 40 ಲಕ್ಷ ಕಳ್ಳತನವಾಗಿತ್ತು.ಕಳ್ಳತನವಾಗಿರುವುದು ಗೊತ್ತಾದ ಕೂಡಲೇ ಅಕ್ಕಪಕ್ಕದ ನಿವಾಸಿಗಳು ತಾವು ನೋಡಿರೋದಾಗಿ ಹೇಳಿದ್ದರು.ಫೋಟೋ ನೋಡಿದಾಗ ತನ್ನ ಅಳಿಯನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.
 
ರೆಜಿನಾ ಅವರ ಚಿಕ್ಕ ಮಗಳು ಲಾವಣ್ಯಾಳನ್ನ ಪ್ರೀತಿಸಿ ಪ್ರದೀಪ್ ಕರೆದುಕೊಂಡು ಹೋಗಿದ್ದ . ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಮಗಳು ಎಲ್ಲಿದ್ದಾಳೆಂದು ಕೂಡ ರೆಜಿನಾ ಅವರಿಗೆ ಗೊತ್ತಿಲ್ಲವಂತೆ ,ಸದ್ಯ ಈ ಸಂಬಂಧ ತನ್ನ ಅಳಿಯನ ವಿರುದ್ಧ ರೆಜಿನಾ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ