ಮಂಡ್ಯದ ‘ಕೈ’ ಮುಖಂಡನ ಬಂಧನ

ಬುಧವಾರ, 11 ಮೇ 2022 (18:28 IST)
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ಕಲಬುರಗಿ ಜೊತೆ ಬೇರೆ ಬೇರೆ ಜಿಲ್ಲೆಗಳಲ್ಲೂ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಈ ಅಕ್ರಮಕ್ಕೆ ಸಂಬಂಧಿಸಿ ಮಂಡ್ಯದ ಮಾಜಿ ಸಚಿವರ ಆಪ್ತನನ್ನು ಬಂಧಿಸಲಾಗಿದೆ..ಶ್ರವಣಬೆಳಗೊಳ ಪಿಎಸ್‌ಐ ಪರವಾಗಿ ಅಕ್ರಮವೆಸಗಿರುವ ಆರೋಪದಡಿ ಶರತ್ ರಾಮಣ್ಣ ಎಂಬಾತನನ್ನು ಸಿಐಡಿ ಪೊಲೀಸರು ಅರೆಸ್ಟ್ ಮಾಡಿದ್ದು, ಶರತ್ ಮಂಡ್ಯ ಜಿಲ್ಲೆಯ ನಾಗಮಂಗಲದವನಾಗಿದ್ದಾನೆ.. ಈತ ಮಾಜಿ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು...ಶರತ್ ರಾಮಣ್ಣ ಪಿಎಸ್‌ಐ ಕೆಲಸದ ವಿಚಾರದಲ್ಲಿ ಮಧ್ಯವರ್ತಿಯಾಗಿದ್ದರು. ಪರೀಕ್ಷೆ ಮುಗಿದ ಬಳಿಕ ನೇಮಕಾತಿ ವಿಭಾಗದ ಸ್ಟ್ರಾಂಗ್‌ ರೂಮ್‌ನಲ್ಲಿದ್ದ ಕೆಲ ಅಭ್ಯರ್ಥಿಗಳ OMR ಶೀಟ್‌ಗಳನ್ನು ಈ ಆರೋಪಿಗಳು ತಿದ್ದಿದ್ದಾರೆ. ಇದಕ್ಕೆ ತಲಾ ಅಭ್ಯರ್ಥಿಯಿಂದ 30-40 ಲಕ್ಷ  ವಸೂಲಿ ಮಾಡಿದ್ದಾರೆ ಎನ್ನಲಾಗ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ