ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದವರ ಬಂಧನ

ಮಂಗಳವಾರ, 1 ನವೆಂಬರ್ 2022 (16:47 IST)
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಕೆಲ ಜನರು ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ್ರು. ಕಲಬುರಗಿ ನಗರದ ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದವರನ್ನು ಬಂಧಿಸಲಾಯಿತು. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಧ್ವಜಾರೋಹಣಕ್ಕೆ ಯತ್ನ ನಡೆದಿದ್ದು, S.M. ಪಾಟೀಲ್ ನರಿಬೋಳ ಸೇರಿದಂತೆ 25ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಇವರುಗಳು ಕೋರ್ಟ್ ಸರ್ಕಲ್‌‌ನಿಂದ ಪಟೇಲ್ ಸರ್ಕಲ್‌ವರೆಗೆ ಮೆರವಣಿಗೆ ನಡೆಸುವ ತೀರ್ಮಾನ ಕೈಗೊಂಡಿದ್ರು. ಈ ವೇಳೆ ಮಾರ್ಗಮಧ್ಯೆ ಕಲಬುರಗಿ ಪೊಲೀಸರು ಮೆರವಣಿಗೆಕಾರರನ್ನು ಬಂಧಿಸಿದ್ರು. ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರದಿಂದ ಅನ್ಯಾಯವಾಗ್ತಿದೆ ಎಂದು ಆರೋಪಿಸಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ಬೇಡಿಕೆಯನ್ನು ಇವರು ಇಟ್ಟಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ