ಅರವಿಂದ್‌ ಕೇಜ್ರಿವಾಲ್‌ಗೆ ಸಿಗದ ರಿಲೀಫ್‌, ಮಧ್ಯಂತರ ಅರ್ಜಿ ವಜಾ ಮಾಡಿದ ಕೋರ್ಟ್‌

sampriya

ಬುಧವಾರ, 5 ಜೂನ್ 2024 (19:58 IST)
ಬೆಂಗಳೂರು: ವೈದ್ಯಕೀಯ ಕಾರಣಗಳಿಗಾಗಿ ಏಳು ದಿನಗಳ ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಬುಧವಾರ ವಜಾಗೊಳಿಸಿದೆ. ಅರವಿಂದ್ ಕೇಜ್ರಿವಾಲ್ ಅವರು  ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದಾರೆ.

ನ್ಯಾಯಾಲಯದ ಮುಂದೆ ವಾಸ್ತವಿಕವಾಗಿ ಹಾಜರುಪಡಿಸಲಾದ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ರೂಸ್ ಅವೆನ್ಯೂ ನ್ಯಾಯಾಲಯವು ಜೂನ್ 19 ರವರೆಗೆ ವಿಸ್ತರಿಸಿದೆ.

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ. ಪ್ರಕರಣದಲ್ಲಿ ಡೀಫಾಲ್ಟ್ ಜಾಮೀನು ಕೋರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯವು ಜೂನ್ 7 ರಂದು ಕೈಗೆತ್ತಿಕೊಳ್ಳಲಿದೆ.

ಮಾರ್ಚ್‌ನಲ್ಲಿ ಬಂಧಿಸಲ್ಪಟ್ಟ ಕೇಜ್ರಿವಾಲ್ ಅವರಿಗೆ  ಲೋಕಸಭಾ ಚುನಾವಣೆಯಲ್ಲಿ ಪಾಲ್ಗೊಳ್ಳಲು ಜೂನ್ 1ರ ವರೆಗೆ ಮಧ್ಯಂತರ ಜಾಮೀನು ನೀಡಲಾಯಿತು. ಅದರಂತೆ ಜೂನ್‌ 2ರಂದು ತಿಹಾರ್‌ ಜೈಲಿಗೆ ಅರವಿಂದ್‌ ಕೇಜ್ರಿವಾಲ್‌ ಅವರು ವಾಪಾಸ್ಸಾದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ