ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣವನ್ನು ಎಸ್‌ಐಟಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ದೇವೇಗೌಡರ ಕುಟುಂಬವನ್ನು ಟಾರ್ಗೇಟ್ ಮಾಡಿದ ರಾಜ್ಯದ ಕಾಂಗ್ರೆಸ್ ಸರ್ಕಾರ ರೇವಣ್ಣ ಅವರನ್ನು ಟಾರ್ಗೆಟ್ ಮಾಡಿ ಜೈಲಿಗೆ ಕಳಿಹಿಸಿತು. ಇದೆಲ್ಲ ಹೆಚ್ಚು ದಿನ ನಡೆಯುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು
ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಅವರು ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕುಮಾರಸ್ವಾಮಿ ಅವರು ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶದಿಂದ ಬಂದು ಎಸ್‌ಐಟಿ ತನಿಖೆ ಎದುರಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವೆಲ್ಲ ಕಾಯುತ್ತಿದ್ದೇವೆ. ಒಬ್ಬ ಪ್ರಜೆಯಾಗಿ ಪ್ರಜ್ವಲ್ ಶೀಘ್ರವಾಗಿ ಬರಲಿ ಎನ್ನುವುದು ನಮ್ಮ ಆಶಯ ಕೂಡಾ ಎಂದರು.
ಸರ್ಕಾರದಲ್ಲಿರುವ ಪಕ್ಷ ಯಾವತ್ತೂ ನ್ಯಾಯಯುತವಾಗಿ ನಡೆದುಕೊಳ್ಳುವುದನ್ನು ಕಲಿಯಬೇಕು ಎಂದು ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.