ಆಷಾಢ ಮುಗಿಯುತ್ತಿದ್ದಂತೆ ಸಿಎಂ ಅದೃಷ್ಟ ನಿವಾಸಕ್ಕೆ ಡಿಕೆ ಶಿವಕುಮಾರ್

ಭಾನುವಾರ, 16 ಜುಲೈ 2023 (09:02 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಿಂದ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ.
 
ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಸ್ವಂತ ಮನೆ ಧವಳಗಿರಿಗೆ ಶಿಫ್ಟ್ ಆಗಿದ್ದಾರೆ.

ಸದ್ಯ ಕಾವೇರಿ ನಿವಾಸದಲ್ಲಿ ರಿನೋವೇಷನ್ ಕಾರ್ಯ ಬಹುತೇಕ ಮುಗಿದಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಇಂದು (ಜುಲೈ 15) ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಆಷಾಢ ಮಾಸ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಕಾವೇರಿ ನಿವಾಸ ಪ್ರವೇಶ ಮಾಡಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ