ಮೋದಿ ದಕ್ಷಿಣ ಕನ್ನಡಕ್ಕೆ ಕೊಟ್ಟದೆಷ್ಟು, ಕಿತ್ತುಕೊಂಡದ್ದೆಷ್ಟು: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Sampriya

ಸೋಮವಾರ, 15 ಏಪ್ರಿಲ್ 2024 (16:06 IST)
Photo Courtesy X
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು  ದಕ್ಷಿಣ ಕನ್ನಡಕ್ಕೆ ಕೊಟ್ಟದೆಷ್ಟು, ಕಿತ್ತುಕೊಂಡದ್ದೆಷ್ಟು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ನಿನ್ನೆ ಬಿಜೆಪಿ ಸ್ಪರ್ಧಿಗಳ ಪರ ಮಂಗಳೂರಿನಲ್ಲಿ ಮತಯಾಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸನ್ಮಾನ್ಯ ಪ್ರಧಾನಿ @narendramodi
 ಅವರೇ, ದಕ್ಷಿಣ ಕನ್ನಡಕ್ಕೆ ನಿಮಗೆ ಸ್ವಾಗತ.  ಕಳೆದ 33 ವರ್ಷಗಳಿಂದ ದಕ್ಷಿಣ ಕನ್ನಡ ಲೋಕಸಭಾ
ಕ್ಷೇತ್ರದ ಮತದಾರರು ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸುತ್ತಾ ಬಂದಿದ್ದಾರೆ. ಅದಕ್ಕಿಂತ ಹಿಂದಿನ 39 ವರ್ಷ ಈ ಕ್ಷೇತ್ರವನ್ನು ನಮ್ಮ ಕಾಂಗ್ರೆಸ್ ಪಕ್ಷದ ಸದಸ್ಯರು ಲೋಕಸಭೆಯಲ್ಲಿ ಪ್ರತಿನಿಧಿಸಿದ್ದರು.

ಕಳೆದ 33 ವರ್ಷಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ನೀವು ಕೊಟ್ಟದ್ದೆಷ್ಟು? ಎನ್ನುವ ಲೆಕ್ಕ ಕೊಡಿ, ಈ ಜಿಲ್ಲೆಯಿಂದ ಏನು ಕಿತ್ತುಕೊಂಡಿದ್ದೀರಿ ಎನ್ನುವ ಲೆಕ್ಕವನ್ನು ನಾನು ಕೊಡುತ್ತೇನೆ.

ಬಜ್ಪೆಯ ವಿಮಾನ ನಿಲ್ದಾಣದ ಕನಸು ಕಂಡವರು ಉಳ್ಳಾಲ ಶ್ರೀನಿವಾಸ ಮಲ್ಯ.
ಮಲ್ಯರ ಕನಸನ್ನು ನನಸು ಮಾಡಿದವರು ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ. ಶ್ರೀನಿವಾಸ ಮಲ್ಯರ ಪ್ರಯತ್ನದ ಫಲವಾದ ಈ ವಿಮಾನ ನಿಲ್ದಾಣವನ್ನು ನೀವು ನಿಮ್ಮ ಉದ್ಯಮಿ ಮಿತ್ರ ಗೌತಮ ಅದಾನಿ ಅವರಿಗೆ ನೀಡಿದಿರಿ. ಈಗ ಹೇಳಿ, ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದೆಷ್ಟು? ಕಿತ್ತುಕೊಂಡದ್ದೆಷ್ಟು?

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ