ನಿರ್ಮಲಾನಂದ ಸ್ವಾಮೀಜಿ ಹೇಗೆ ಹೇಳುತ್ತಾರೋ, ಹಾಗೆ ಕೇಳುತ್ತೇವೆ : ಸಿಎಂ
ಉರಿಗೌಡ, ದೊಡ್ಡ ನಂಜೇಗೌಡ ಸಿನಿಮಾ ನಿರ್ಮಾಣದ ಕುರಿತಂತೆ ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದ ಸ್ವಾಮೀಜಿ ರಾಜಕೀಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.ಈ ಬಗ್ಗೆ ಮಾತನಾಡಿ ಸಿಎಂ ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣಕ್ಕೆ ಬ್ರೇಕ್ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ನಿರ್ಮಲಾನಂದ ಸ್ವಾಮೀಜಿ ಹೇಗೆ ಹೇಳುತ್ತಾರೋ ಹಾಗೆ ಕೇಳುತ್ತೇವೆ ಎಂದು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ,ನಿರ್ಮಲಾನಂದ ಸ್ವಾಮೀಜಿ ಹೇಗೆ ಹೇಳುತ್ತಾರೋ, ಹಾಗೆ ಕೇಳುತ್ತೇವೆ. ಅದರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಅದರ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.