ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡೋಕೆ ಆಗಲ್ಲ: ಸದಾನಂಗೌಡ

ಶುಕ್ರವಾರ, 23 ಜೂನ್ 2023 (12:23 IST)
ಚಾಮರಾಜನಗರ : 13 ಬಾರಿ ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡಲು ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಡಿವಿ ಸದಾನಂಗೌಡ ಟಾಂಗ್ ನೀಡಿದ್ದಾರೆ.
 
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಅಕ್ಕಿ ಕೊಡುತ್ತಿಲ್ಲವೆಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕುಣಿಯಲಾರದವನು ನೆಲಡೊಂಕು ಅಂದನಂತೆ. ಹಾಗೆ ಏನೇನೋ ಸಬೂಬು ಹೇಳುತ್ತಿದ್ದಾರೆ.

ಅಕ್ಕಿ ಕೊಡುತ್ತೇನೆ ಎಂದು ಹೇಳುವಾಗ ಇವರಿಗೆ ಪರಿಜ್ಞಾನ ಇರಲಿಲ್ವಾ? ನನಗೂ, ನಿಮಗೂ ನಮ್ಮ ಮನೆಯವರಿಗೂ, ನಿಮ್ಮ ಮನೆಯವರಿಗೂ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಟವಲ್ ಹೆಗಲಿನಿಂದ ಎಲ್ಲೋಯ್ತು? ಏನಾದ್ರೂ ಆಗ್ಲಿ ಕೊಡ್ತೀನಿ ಎಂದು ದೊಂಬರ ಲಾಗ ಹಾಕಿದ್ದರು. ಒಬ್ಬ ಸಿಎಂ ಆಗುವವನಿಗೆ ಮುಂದಾಲೋಚನೆ ಇರಬೇಕು ಎಂದು ವಾಗ್ದಾಳಿ ನಡೆಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ