ಕೊರೊನಾ ಹೆಚ್ಚಾದಂತೆ ಕಳ್ಳಭಟ್ಟಿ ಸಾರಾಯಿ ತಯಾರಿ ಜೋರು
ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಆದರೂ ಕಳ್ಳಭಟ್ಟಿ ದಂಧೆ ಅಲ್ಲಲ್ಲಿ ಮುಂದುವರಿದೇ ಇದೆ.
ಕಲಬುರಗಿ ಉಪವಿಭಾಗದ ಅಬಕಾರಿ ಉಪ ನಿರೀಕ್ಷಕ ಸಂತೋಷ ಕುಮಾರ ಹಾಗೂ ಕಲಬುರಗಿ ವಲಯ ನಂ. 1ರ ಅಬಕಾರಿ ಉಪ ನಿರೀಕ್ಷಕ ದಾವಲಸಾಬ ಹಾಗೂ ಕಲಬುರಗಿ ಡಿಸಿಇಐಬಿ ಅಬಕಾರಿ ನಿರೀಕ್ಷಕ ಪಂಡಿತ ಅವರು ತಲಾ ಒಂದು ಸೇರಿದಂತೆ ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಜಪ್ತಿ ಮಾಡಲಾದ ಒಟ್ಟು ಮದ್ಯದ ಅಂದಾಜು ಮೌಲ್ಯ 8000 ರೂ. ಇರುತ್ತದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.