ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅಶೋಕ್ ಕಶ್ಯಪ್
ಸುನೀಲ್ ಪುರಾಣಿಕ್ ಅವರಿಂದ ತೆರುವಾಗಿದ್ದ ಸ್ಥಾನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಖ್ಯಾತ ಛಾಯಾಗ್ರಾಹಕ ಅಶೋಕ್ ಕಶ್ಯಪ್ ನೇಮಕಗೊಂಡಿದ್ದಾರೆ.
ಸೋಮವಾರ(ನವೆಂಬರ್ 7)ರಂದು ಅಶೋಕ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಸೋಮವಾರ ಅಶೋಕ್ ಕಶ್ಯಪ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿರುವ ಅಶೋಕ್ ಕಶ್ಯಪ್, ಲಿಫ್ಟ್ ಕೊಡ್ಲಾ, ಧ್ವಜ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.