ಮಂಗಳೂರಿನಲ್ಲಿ ಎಎಸ್ಐ ಮೇಲೆ ಮಾರಣಾಂತಿಕ ಹಲ್ಲೆ
ನಿನ್ನೆ ಅನುಮತಿ ಪಡೆಯದೇ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ಸಂದರ್ಭ ಎಎಸ್ಐ ಲಾಠಿಚಾರ್ಜ್ ಮಾಡಿದ್ದರು. ಈ ಸಂದರ್ಭ ಪೊಲೀಸರನ್ನ ಬಿಡುವುದಿಲ್ಲ ಎಂದು ಪಿಎಫ್ಐ ಕಾರ್ಯಕರ್ತರು ಕೂಗಿದ್ದರು. ಹೀಗಾಗಿ, ಘಟನೆಯಲ್ಲಿ ಸಂಘಟನೆ ಕಾರ್ಯಕರ್ತರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.