ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಿಡಿಎ ಅಧ್ಯಕ್ಷ ವಿಶ್ವನಾಥ್ ಹತ್ಯೆ

ಶನಿವಾರ, 4 ಡಿಸೆಂಬರ್ 2021 (19:40 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ಪ್ರಕರಣ ಸಂಬಂಧ ಹೊಸ ತಿರುವು ಪಡೆಯುತ್ತಿದೆ. ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸೇರಿ ಕೆಲವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ.
ಪ್ರಕರಣ ಸಂಬಂಧ ಗೋಪಾಲಕೃಷ್ಣ, ಕುಳ್ಳ ದೇವರಾಜ್ ಸೇರಿ 10 ಮಂದಿಗೆ ರಾಜಾನುಕುಂಟೆ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರೂ, ಹಾಜರಾಗದೇ ತಲೆ ಮರಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೆ 2ನೇ ಎಸಿಜೆಎಂ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದಾರೆ.
ವಿಚಾರಣೆಗೆ ಹಾಜರಾಗದ ಹಿನ್ನೆಲೆ ರಾಜಾನುಕುಂಟೆ ಪೊಲೀಸರು ಎರಡನೇ ನೋಟಿಸ್ ನೀಡಲು ಮುಂದಾಗಿದ್ದಾರೆ. ಇದಕ್ಕೂ ಹಾಜರಾಗದಿದ್ದರೆ, ನ್ಯಾಯಾಲಯದ ಅನುಮತಿ ಪಡೆದು ಎಲ್ಲರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ .
ಸಿಬಿಐ ತನಿಖೆ ನಡೆಸಲಿ:
ಶಾಸಕ ಎಸ್​.ಆರ್​.ವಿಶ್ವನಾಥ್ ಹತ್ಯೆ ಸಂಚು ಪ್ರಕರಣದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದರು. ರಾಜಾನುಕುಂಟೆಯಲ್ಲಿ ಶಾಸಕ ವಿಶ್ವನಾಥ್ ಅವರಿಗಿಂತ ನಾಗಶೆಟ್ಟಿಹಳ್ಳಿ ಸತೀಶ್ ಅವರೇ ಪ್ರಭಾವಶಾಲಿ. ಎಲ್ಲವೂ ಅವರು ಹೇಳಿದಂತೆಯೇ ನಡೆಯುತ್ತದೆ. ನನ್ನ ಮೇಲೆ ಕೇಳಿಬಂದಿರುವ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸಿದರೆ ಸತ್ಯಾಂಶ ಹೊರಬರುತ್ತದೆ. ವಿಶ್ವನಾಥ್, ದೇವರಾಜ್, ಸತೀಶ್ ಮೂರೂ ಜನ ಸೇರಿ ನನ್ನನ್ನು ಟ್ರ್ಯಾಪ್ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ