ದಲಿತ ಮುಖಂಡ, ಬಿಜೆಪಿ ಲೀಡರ್ ಪುತ್ರನಿಂದ ಪೊಲೀಸರ ಮೇಲೆ ಹಲ್ಲೆ..?
ಬೆಂಗಳೂರು: ದಲಿತ ಸಂಘಟನೆ ಮುಖಂಡ ಮತ್ತು ಬಿಜೆಪಿ ಎಸ್ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಪುತ್ರನ ವಿರುದ್ಧ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿ.ನಾ.ರಾಮು ಪುತ್ರ ಕಾರ್ಲ್ ಮಾರ್ಕ್ಸ್ ಸೇರಿದಂತೆ ನಾಲ್ವರನ್ನ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ರಾಮು ಪುತ್ರ ಕಾರ್ಲ್ ಮಾರ್ಕ್ಸ್ ಸೇರಿ ನಾಲ್ವರನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಗಾಯಗೊಂಡಿರುವ ಪೇದೆ ಉಮೇಶ್ ಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.