ಕಾವೇರಿ ವಿವಾದ: ಸೆ.24 ರಂದು ಅಧಿವೇಶನ ಕರೆಯಲು ಸಂಪುಟ ಸಭೆ ನಿರ್ಧಾರ

ಬುಧವಾರ, 21 ಸೆಪ್ಟಂಬರ್ 2016 (14:41 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನಿಂದ ರಾಜ್ಯಕ್ಕೆ ಅನ್ಯಾಯವಾಗಿರುವ ಹಿನ್ನೆಲೆಯಲ್ಲಿ ಒಂದು ದಿನದ ತುರ್ತು ವಿಧಾನ ಮಂಡಲ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ. 
 
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂತ್ರಿ ಪರಿಷತ್ ಸಭೆ ನಡೆಯಿತು. ಕಾವೇರಿ ವಿಚಾರದಲ್ಲಿ ರಾಜ್ಯದ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ಒಂದು ದಿನ ವಿಧಾನ ಮಂಡಲ ಅಧಿವೇಶನ ಕರೆಯಲು ನಿರ್ಧಾರ ಕೈಗೊಳ್ಳಲಾಗಿದೆ. 
 
ಸಂಕಷ್ಟದ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸುವುದು ಬೇಡ. ಕಾನೂನಾತ್ಮಕವಾಗಿ ಬಂದದ್ದನ್ನು ಎದುರಿಸೋಣ ಎಂದು ಮಂತ್ರಿ ಪರಿಷತ್ ಸಭೆಯಲ್ಲಿ ಒಕ್ಕೊರಲು ನಿರ್ಣಯ ಕೈಗೊಳ್ಳಲಾಗಿದೆ.
 
ಅನುಷ್ಠಾನ ಮಾಡಲಾಗದ ತೀರ್ಪುನಿಂದ ಕಾನೂನು ಉಲ್ಲಂಘನೆಯಾಗುವುದಿಲ್ಲ. ಹೀಗಂತ ಬೇರೆ ಪ್ರಕರಣಗಳಲ್ಲಿ ನ್ಯಾಯಮೂರ್ತಿ ಉದಯ್ ಲಲಿತ್ ಅವರೇ ತೀರ್ಪು ನೀಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಹಿರಿಯ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಹಿತಿ ನೀಡಿದರು. ಇದಕ್ಕೆ ಸಿಎಂ ಸಿದ್ದರಾಮಯ್ಯನರು ಸಹಮತ ಸೂಚಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ