ಸುಸೂತ್ರ ಕಲಾಪಕ್ಕೆ ನಿಯಮದಲ್ಲಿ ತಿದ್ದುಪಡಿ: ಕೋಳಿವಾಡ್

ಬುಧವಾರ, 17 ಆಗಸ್ಟ್ 2016 (16:28 IST)
ವಿಧಾನಸಭೆ ಕಲಾಪಗಳು ಸುಸೂತ್ರವಾಗಿ ನಡೆಯುತ್ತಿಲ್ಲ ಎಂದು ವಿಧಾನಸಭೆ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಕಲಾಪಗಳು ಸೂಸುತ್ರವಾಗಿ ನಡೆಯುತ್ತಿಲ್ಲ. ಜನಪ್ರತಿನಿಧಿಗಳ ಸಾರ್ವಜನಿಕರ ಸಮಸ್ಯೆಗಳ ಕುರಿತು ಚರ್ಚಿಸಬೇಕು. ಹೀಗಾಗಿ ಕಲಾಪಗಳ ನಿಯಮದಲ್ಲಿ ಬದಲಾವಣೆ ತರಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
 
ಸದನದಲ್ಲಿ ಪ್ರತಿದಿನ 4 ಗಂಟೆಯಾದರು ಕಲಾಪಗಳಲ್ಲಿ ಚರ್ಚೆಗಳು ನಡೆಯಬೇಕು. ಕಲಾಪಗಳ ನಿಯಮದಲ್ಲಿ ತಿದ್ದುಪಡಿ ತರಲು ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದರು.
 
ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನಕ್ಕೂ ಮುನ್ನವೇ ಸದನದ ಕಲಾಪಗಳ ನಿಯಮಗಳಲ್ಲಿ ಬದಲಾವಣೆ ತರುವುದು ಅವಶ್ಯಕ ಎಂದು ವಿಧಾನಸಭೆ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ್ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

ವೆಬ್ದುನಿಯಾವನ್ನು ಓದಿ