ಅಶ್ವಥ್ ನಾರಯಣರನ್ನ ಅದ್ದೂರಿಯಾಗಿ ಸನ್ಮಾನಿಸಿದ ಜನರು

ಶುಕ್ರವಾರ, 2 ಡಿಸೆಂಬರ್ 2022 (14:41 IST)
ನಾಡಪ್ರಭು ಕೆಂಪೇಗೌಡರ ಬಳಗ ನೆಲಮಂಗಲದಲ್ಲಿ ಆಯೋಜಿಸಿದ್ದ ಜನಾಭಿನಂದನ ಸಮಾರಂಭದಲ್ಲಿ ಭಾಗವಹಿಸಲು‌ ಬಂದ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಮಾಜಿ ಶಾಸಕ ನಾಗರಾಜ, ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಮಧುಸೂದನ್, ಬಸವನಹಳ್ಳಿ ಮಠದ ಬಸವ ರಮಾನಂದಸ್ವಾಮಿ ಸೇರಿದಂತೆ ಇತರ ಪ್ರಮುಖರು ಇದ್ದರು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಚಿವರನ್ನು ನೆಲಮಂಗಲದ ಜನರು ಸನ್ಮಾನಿಸಿದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ