ಏ.5ಕ್ಕೆ ರಾಹುಲ್ ಗಾಂಧಿ ಮತ್ತೆ ಕೋಲಾರಕ್ಕೆ

ಗುರುವಾರ, 30 ಮಾರ್ಚ್ 2023 (08:35 IST)
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಅತ್ತ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ನಾಯಕರು ಹಾಗೂ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿವೆ.
 
ರಾಹುಲ್ ಗಾಂಧಿ ಅನರ್ಹತೆ ಸಂವಿಧಾನಬಾಹಿರ, ಪ್ರಜಾಪ್ರಭುತ್ವ ವಿರೋಧಿ ಹಾಗೂ ವಿಪಕ್ಷಗಳನ್ನು ಹತ್ತಿಕ್ಕುವ ಹುನ್ನಾರ ಎಂದು ಟೀಕಿಸಿವೆ. ಅಲ್ಲದೇ ಅನರ್ಹತೆ ಖಂಡಿಸಿ ದೇಶಾದ್ಯಂತ ಹೋರಾಟ ಕೂಡ ನಡೆಸಲಾಗುತ್ತಿದೆ. ಕರ್ನಾಟಕದಲ್ಲೂ ಕೋಲಾರದಿಂದಲೇ ‘ಸತ್ಯಮೇವ ಜಯತೆ’ ಹೆಸರಿನಲ್ಲಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಏ.5 ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ದಾರೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ.

ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ