ಅಧಿಕಾರ ಹೋದ್ರೆ ಹೋಗಲಿ ನೀರು ಬಿಡಬಾರದು,: ಜಿ. ಮಾದೇಗೌಡ ಗುಡುಗು

ಮಂಗಳವಾರ, 27 ಸೆಪ್ಟಂಬರ್ 2016 (19:59 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅಧಿಕಾರ ಹೋದ್ರೆ ಹೋಗಲಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬಾರದು ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಹೇಳಿದ್ದಾರೆ.
 
ಕಾವೇರಿ ನದಿಯಿಂದ ತಮಿಳುನಾಡಿಗೆ ಮೂರು ದಿನಗಳ ಕಾಲ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ನ್ಯಾಯಾಲಯ ಆದೇಶ ನೀಡಿದೆ. ನ್ಯಾಯಂಗ ನಿಂದನೆಯಾದರೇ ಆಗಲಿ. ಆದರೆ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರರು ಎಂದು ಆಗ್ರಹಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರ ಕಳೆದುಕೊಂಡರು ಪರವಾಗಿಲ್ಲ. ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಕೈಗೊಳ್ಳಬಾರದು. ಅಧಿಕಾರ ಬೇಕೇ ಬೇಕು ಅನ್ನುವುದಾದರೇ ನೀರು ಬಿಡಲಿ ಎಂದು ಹೇಳಿದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸದ ಸುಪ್ರೀಂಕೋರ್ಟ್, ಕಾವೇರಿ ನದಿಯಿಂದ ಮೂರು ದಿನಗಳ ಅವಧಿಯಲ್ಲಿ 18 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ