ಕೊನೆಗೂ ಬಂತು ಎತ್ತಿನಹೊಳೆ ಯೋಜನೆಯ ನೀರು: ಗೌರಿ ಹಬ್ಬದಂದೇ ಏತ ಕಾಮಗಾರಿ ಲೋಕಾರ್ಪಣೆ

Sampriya

ಭಾನುವಾರ, 1 ಸೆಪ್ಟಂಬರ್ 2024 (14:49 IST)
Photo Courtesy X
ಬೆಂಗಳೂರು: ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 6ರಂದು ಗೌರಿ ಹಬ್ಬದಂದು ಲೋಕಾರ್ಪಣೆ ಮಾಡುವರು ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗೆ ಈ ಯೋಜನೆಯ ಲಾಭವಿದೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ ಎಂದು ಮಾಹಿತಿ ನೀಡಿದರು.

ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರವಾದ ಕಾರ್ಯಕ್ಕೆ ಬಂದು ಶುಭ ಗಳಿಗೆಗೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್‌ಗಳು ನೀರನ್ನು ಎತ್ತುತ್ತಿವೆ. ಈ ತಿಂಗಳ 6 ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ