ಮುಂಬೈನಲ್ಲಿ ಭೀಕರ ಬೆಂಕಿ ದುರಂತ ಕನಿಷ್ಠ 7 ಸಾವು,51 ಮಂದಿಗೆ ಗಾಯ

ಶನಿವಾರ, 7 ಅಕ್ಟೋಬರ್ 2023 (16:00 IST)
ಮುಂಬೈನ ಗೋರೆಗಾಂವ್ ವೆಸ್ಟ್ ನಲ್ಲಿರುವ ಏಳು ಅಂತಸ್ತಿನ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಸುಮಾರು 51 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಗಾಯಾಳುಗಳನ್ನು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮುಂಜಾನೆ 3 ಗಂಟೆಗೆ ಗೋರೆಗಾಂವ್ ಪಶ್ಚಿಮದ ಆಜಾದ್ ಮೈದಾನದ ಬಳಿ ಇರುವ ಜೈ ಭವಾನಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಗಂಟೆಗಳ ಸತತ ಕಾರ್ಯಾಚರಣೆ  ನಂತರ ಬೆಂಕಿಯನ್ನು ನಂದಿಸಲಾಗಿದೆಗಾಯಗೊಂಡ ಸ್ವಲ್ಪ ಮಂದಿಯನ್ನು ಹಿಂದೂಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನುಳಿದ ಸ್ವಲ್ಪ ಮಂದಿಯನ್ನು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ