85 ನೇ ಸಾಹಿತ್ಯ ಸಮ್ಮೇಳನದಲ್ಲಿ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ಗುರುವಾರ, 6 ಫೆಬ್ರವರಿ 2020 (19:43 IST)
ಕಲಬುರಗಿಯ ವಿಶ್ವವಿದ್ಯಾಲಯ ಆವರಣದಲ್ಲಿ ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ನಡೆದ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ 2ನೇ ದಿನದ ಸಮಾರಂಭದಲ್ಲಿ ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ ಗುಡುಗಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಯನ್ನು ನಾವೆಲ್ಲರೂ ಸೇರಿ ಮಾಡಬೇಕು. ಬರೀ ಟೀಕೆ ಮಾಡುತ್ತಾ ಕುಳಿತರೆ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಂತ ಕೇಂದ್ರ ಮಾಜಿ ಸಚಿವರಾದ ಡಾ.ಮಲ್ಲಿಕಾರ್ಜುನ್‍ ಖರ್ಗೆ ಹೇಳಿದ್ದಾರೆ.

ರಾಜ್ಯ ಏಕೀಕರಣಗೊಂಡು 6 ದಶಕಗಳ ಕಳೆದರೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿದೆ. ಆಯವ್ಯಯದಲ್ಲಿ ಈ ಭಾಗಕ್ಕೆ ಹೆಚ್ಚಿನ ಅನುದಾನ ಮೀಸಲಿಡುವ ಮೂಲಕ ಇಲ್ಲಿನವರಿಗೆಏಕೀಕರಣದ ಲಾಭ ಪಡೆಯಲು ಅವಕಾಶ ಮಾಡಿಕೊಡಬೇಕು.

ರಾಜ್ಯದ ನಾಲ್ಕೂ ಭಾಗಗಳು ಸಮಾನವಾಗಿ ಅಭಿವೃದ್ಧಿಯಾಗಬೇಕು.  ಹೀಗಾಗಿ ಸರ್ವರಿಗೂ ಸಮಾನತೆ ಸಾರಿದ ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಿಂದಲೇ ಅನುದಾನ ಹಂಚಿಕೆ ಪ್ರಾರಂಭವಾಗಲಿ ಎಂದು ಅಭಿಪ್ರಾಯಪಟ್ಟರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ