ಅತ್ತ ಪ್ರಾಸಿಕ್ಯೂಷನ್ ತಲೆಬಿಸಿ, ಇತ್ತ ಸಿಟಿ ರೌಂಡ್ಸ್‌ನಲ್ಲಿ ಸಿದ್ದರಾಮಯ್ಯ ಬ್ಯುಸಿ

Sampriya

ಗುರುವಾರ, 12 ಸೆಪ್ಟಂಬರ್ 2024 (17:35 IST)
Photo Courtesy X
ಬೆಂಗಳೂರು: ನಗರದ ರಸ್ತೆ ಗುಂಡಿಗಳ ನಿರ್ಮೂಲನೆ ಹಾಗೂ ರಸ್ತೆ ಅಭಿವೃದ್ಧಿ ಮತ್ತು ಇಲಾಖೆಗಳಿಂದ ಕೈಗೊಳ್ಳಲಾಗಿರುವ ಮೂಲಭೂತ ಸೌಕರ್ಯ ಕಾಮಗಾರಿಗಳ ಪರಿವೀಕ್ಷಣೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಸುಮಾರು 12878 ಕಿ.ಮೀ ಉದ್ದದ ರಸ್ತೆ ಜಾಲವಿದ್ದು, ಈ ಪೈಕಿ ಸುಮಾರು 1344.84 ಕಿ.ಮೀ ಗಳು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆ ಗುಂಪಿಗೆ ಸೇರುತ್ತಿದ್ದು, ಉಳಿಕೆ ಸುಮಾರು 11533.16 ಕಿ.ಮೀ ರಸ್ತೆಗಳು ವಲಯ ಮಟ್ಟದ ರಸ್ತೆ ಗುಂಪಿಗೆ ಸೇರಿರುತ್ತದೆ.

ಬೆಂಗಳೂರು ನಗರದ ರಸ್ತೆಗಳ ತಳಭಾಗದಲ್ಲಿ 'ಸಾಂಪ್ರದಾಯಿಕವಾಗಿ' ಬೆಸ್ಕಾಂ ಕೇಬಲ್, ನೀರು ಸರಬಾರಜು ಮತ್ತು ಒಳಚರಂಡಿ ಕೊಳವೆಗಳು, ಗೇಲ್‌ಗ್ಯಾಸ್‌ನ ಕೊಳವೆಗಳು, ಕೆ.ಪಿ.ಟಿ.ಸಿ.ಎಲ್ ಸಂಸ್ಥೆಯ ಬೃಹತ್ ಮತ್ತು ಹೆಚ್ಚಿನ ಸಾಮರ್ಥ್ಯದ ಕೇಬಲ್‌ಗಳ ಅಳವಡಿಕೆ ಮತ್ತು ಒಎಫ್‌ಸಿ ಕೇಬಲ್‌ಗಳ ಅಳವಡಿಕೆಯಿಂದ ರಸ್ತೆಯ ಮೇಲ್ಮೈ ಭಾಗವು ಶಿಥಿಲಗೊಂಡು ರಸ್ತೆ ಗುಂಡಿಗಳು ಉದ್ಭವಿಸುತ್ತಿರುವುದು ಗಮನಿಸಲಾಗಿರುತ್ತದೆ.

ಸದರಿ ರಸ್ತೆ ಗುಂಡಿಗಳನ್ನು ಅತೀ ಶೀಘ್ರವಾಗಿ ದುರಸ್ತಿ ಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿಬಿಎಂಪಿ ಬ್ಯಾಚ್ ಮಿಕ್ಸ್ ಘಟಕವನ್ನು ಸ್ಥಾಪಿಸಲಾಗಿದ್ದು, ಈ ಬ್ಯಾಚ್ ಮಿಕ್ಸ್ ಘಟಕದಿಂದ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಉದ್ಭಿಸುತ್ತಿರುವ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿರುತ್ತದೆ.

ಅದೇ ರೀತಿ ವಲಯ ಮಟ್ಟದ ರಸ್ತೆಗಳನ್ನು ವಾರ್ಡ್ವಾರು ವಿಭಾಗಗೊಳಿಸಲಾಗಿದ್ದು, ಪ್ರತಿ ವಾರ್ಡ್ಗೆ ರೂ.15.00 ಲಕ್ಷಗಳಂತೆ ರಸ್ತೆ ಗುಂಡಿ ಮುಚ್ಚಲು ಅನುದಾನ ಬಿಡುಗಡೆ ಮಾಡಲಾಗಿರುತ್ತದೆ.  ರಸ್ತೆ ಗುಂಡಿ ಮುಚ್ಚುವ ಪ್ರಕ್ರಿಯೆಯು ಜಾರಿಯಲ್ಲಿದ್ದು, ರಸ್ತೆ ಗುಂಡಿ ಉದ್ಭಿಸಿದ ಕೆಲವೇ ಸಮಯದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಲಾಗಿರುತ್ತದೆ.

ಮಳೆಗಾಲದಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಗುಂಡಿಗಳು ಉದ್ಭಿಸುತ್ತಿದ್ದು, ಮಳೆಗಾಲದಲ್ಲಿಯೂ ರಸ್ತೆ ಗುಂಡಿ ಮುಚ್ಚಲು ತಂಪಾದ ಡಾಂಬರ ಮಿಶ್ರಣ ಪದ್ಧತಿ ಅನ್ನು ತಯಾರಿಸುವ ಘಟಕವನ್ನು ಸಹ ಬಿಬಿಎಂಪಿ ವತಿಯಿಂದಲೆ ಸ್ಥಾಪಿಸಲಾಗಿರುತ್ತದೆ.

ರಸ್ತೆ ಅಗೆತದಿಂದ ಆಗುವ ರಸ್ತೆ ಗುಂಡಿಗಳನ್ನು ಆಯಾ ಸಂಸ್ಥೆಗಳೇ ಅಂದರೆ ಬೆಸ್ಕಾಂ, ಕೆ.ಪಿ.ಟಿ.ಸಿ.ಎಲ್, ಗೇಲ್‌ಗ್ಯಾಸ್ ರವರುಗಳೇ ಮುಚ್ಚುವಂತೆ ಆದೇಶ ನೀಡಲಾಗಿದ್ದು, ರಸ್ತೆ ಗುಂಡಿಗಳಿಗೆ ಕಡಿವಾಣ ಹಾಕಲಾಗಿರುತ್ತದೆ.
BWSSB ಸಂಸ್ಥೆ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯತೆಯನ್ನು ಸಾಧಿಸಲಾಗಿದ್ದು, ರಸ್ತೆ ಅಗೆಯುವ/ರಸ್ತೆ ದುರಸ್ಥಿಗೊಳಿಸುವ ಪ್ರಕ್ರಿಯೆಯನ್ನು ಕ್ರಮಬದ್ಧಗೊಳಿಸಲಾಗಿರುತ್ತದೆ.

ರಸ್ತೆ ಅಗೆತವನ್ನು ತಡೆಗಟ್ಟಲು ಪ್ರಮುಖ ರಸ್ತೆಗಳಲ್ಲಿ ರಸ್ತೆ ಅಭಿವೃದ್ಧಿಯ ಜೊತೆಗೆ ಡಕ್ಟ್ಗಳ ನಿರ್ಮಾಣವನ್ನು ಕೈಗೊಂಡಿರುವ ಹಿನ್ನಲೆಯಲ್ಲಿ ರಸ್ತೆ ಗುಂಡಿಗಳ ಉದ್ಭವಿಕೆಗೆ ಕಡಿವಾಣ ಹಾಕಲಾಗಿರುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ