ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ

Sampriya

ಶನಿವಾರ, 14 ಡಿಸೆಂಬರ್ 2024 (16:47 IST)
Photo Courtesy X
ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮನ್ನು ಬಂಧಿಸದಂತೆ ಮೃತನ ಮೃತನ ಪತ್ನಿ ನಿಕಿತಾ ಸಿಂಘಾನಿಯಾ ತನ್ನ ಕುಟುಂಬದೊಂದಿಗೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನವನ್ನು ತಡೆಯಲು ನಿಕಿತಾ ಅವರ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಮತ್ತು ತಂದೆ ಸುಶೀಲ್ ಸಿಂಘಾನಿಯಾ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

34 ವರ್ಷದ ಇಂಜಿನಿಯರ್ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ಡಿಸೆಂಬರ್ 9 ರಂದು ಆತ್ಮಹತ್ಯೆ ಮಾಡಿಕೊಂಡರು. ಆತ್ಮಹತ್ಯೆಗೂ ಮುನ್ನಾ ವಿಡಿಯೋ ರೆಕಾರ್ಡ್ ಮಾಡಿ, ಸುದೀರ್ಘವಾದ ಡೆತ್‌ನೋಟ್ ಬರೆದು ಆತ್ಮಹತ್ಯೆಗೆ ಶರಣಾದರು. ಈ ಪ್ರಕರಣ ದೇಶದಲ್ಲಿ ಸಂಚಲನ ಮೂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಜಸ್ಟೀಸ್ ಫಾರ್ ಅತುಲ್ ಸುಭಾಷ್ ಟ್ರೆಂಡ್ ಜೋರಾಗಿದೆ.

ಇನ್ನೂ ಸಾವಿಗೆ ಪತ್ನಿ ಮತ್ತು ಅವರ ಕುಟುಂಬದವರ ಕಿರುಕುಳ ಎಂದು ಅತುಲ್ ಸುಭಾಷ್ ಹೇಳಿ, ಆತ್ಮಹತ್ಯೆಗೆ ಶರಣಾಗಿದ್ದರು.

ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶೀಘ್ರದಲ್ಲೇ ನಡೆಸಲಿದೆ. ಏತನ್ಮಧ್ಯೆ, ಆರೋಪಿಗಳ ಪರ ವಕೀಲರು ಆರೋಪಗಳನ್ನು ನಿರಾಕರಿಸಿದರು, ಅವುಗಳನ್ನು ಆಧಾರರಹಿತ ಎಂದು ಕರೆದರು ಮತ್ತು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಭರವಸೆ ನೀಡಿದರು.

ಅತುಲ್ ಕುಟುಂಬವು ನ್ಯಾಯಕ್ಕಾಗಿ ಒತ್ತಾಯಿಸಿದೆ ಮತ್ತು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದೆ. ಪೊಲೀಸ್ ತನಿಖೆ ಮುಂದುವರಿದಿದ್ದು, ಮುಂದಿನ ಬೆಳವಣಿಗೆಗಳನ್ನು ನಿರೀಕ್ಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ