ಜೋಡಿ ಕೊಲೆ ಪ್ರಕರಣದ ಆರೋಪಿ ಅವ್ವ ಮಾದೇಶ್ ಪಾಲಿಕೆ ಸದಸ್ಯತ್ವ ರದ್ದು!

ಮಂಗಳವಾರ, 15 ನವೆಂಬರ್ 2016 (15:33 IST)
ಹುಣಸೂರು ಜೋಡಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಮೈಸೂರು ನಗರ ಪಾಲಿಕೆಯ ಕಾರ್ಪೋರೇಟರ್ ಅವ್ವ ಮಾದೇಶ್ ಪಾಲಿಕೆ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ.
 
ಜೊಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ ಅವರು ಅವ್ವ ಮಾದೇಶ್‌ನ ಪಾಲಿಕೆ ಸದಸ್ಯತ್ವವನ್ನು ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. 
 
ಮೈಸೂರು ಜಿಲ್ಲೆಯ ಹುಣಸೂರಿನ ತೋಟದ ಮನೆಯಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾದ ಇಬ್ಬರು ವ್ಯಕ್ತಿಗಳನ್ನು ಕಾರ್ಪೋರೇಟರ್ ಅವ್ವ ಮಾದೇಶ ಹಾಗೂ ಸಹೋದರ ಸೇರಿದಂತೆ 8 ಜನರು ಸೇರಿ ಬರ್ಬರವಾಗಿ ಹತ್ಯೆಗೈದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. 
 
ಈ ಸಂಬಂಧ ಘಟನೆ ನಡೆದ ಕೆಲ ಸಮಯದಲ್ಲೇ ಬಿಳಿಕೆರೆ ಸಮೀಪ ಒಮ್ನಿ ವ್ಯಾನ್ ಅಡ್ಡಗಟ್ಟಿದ ಆರೋಪಿಗಳನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದರು. 
 
ಪ್ರಕರಣದ ಸುದೀರ್ಘ ವಿಚಾರಣೆ ಬಳಿಕ ಮೈಸೂರಿನ 2 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಫೆಬ್ರುವರಿ 26 ರಂದು ಅವ್ವ ಮಾದೇಶ್ ಸೇರಿ 8 ಜನರಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ