ರಾಜ್ಯದಲ್ಲಿ ನವಣಿ, ಸಾವೆ, ರಾಗಿ ಜೋಳ ಸೇರಿದಂತೆ ಎಲ್ಲ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಆಗ ಕೃಷಿ ಕೇವಲ ಆಹಾರ ಉತ್ಪಾದನೆಗೆ ಮಾತ್ರ ಸೀಮಿತವಾಗಿತ್ತು. ಈಗ ವಾಣಿಜ್ಯ ಉದ್ದೇಶಕ್ಕೆ ಕೃಷಿ ಮಾಡಲಾಗುತ್ತಿದೆ.
ಆಹಾರ ಧಾನ್ಯ ಉತ್ಪಾದನೆ ಹಾಗೂ ವಾಣಿಜ್ಯ ಬೆಳೆಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆಹಾರ ಸುರಕ್ಷತೆಗೆ ತೊಂದರೆಯುಂಟಾಗಬಹುದು. ಬರುವ ದಿನಮಾನದಲ್ಲಿ ಆಹಾರ ಕೊರತೆ ಉಂಟಾಗಬಹುದೆಂದು ವಿಶ್ವ ಆಹಾರ ತಜ್ಞರು ತಿಳಿಸಿದ್ದಾರೆ.
ಆಹಾರದ ಪ್ರಮಾಣ, ಧಾನ್ಯಗಳು, ನಾರಿನಾಂಶ, ಪೌಷ್ಟಿಕಾಂಶ ಇರಬೇಕು ಎಂಬ ಬಗ್ಗೆ ಅಧ್ಯಯನ ಮಾಡಿ ಈ ವಿಷಯಗಳಲ್ಲಿ ರೈತರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದರು.