ವಿಶ್ವ ತಂಬಾಕು ನಿಷೇಧ ದಿನದ ಅಂಗವಾಗಿ ಬಿಬಿಎಂಪಿ ವತಿಯಿಂದ ಜಾಗೃತಿ ಕಾರ್ಯಕ್ರಮ
ಇಂದು ವಿಶ್ವ ತಂಬಾಕು ನಿಷೇಧ ದಿನದ ಅಂಗವಾಗಿ ಬಿಬಿಎಂಪಿ ವತಿಯಿಂದ ಜಾಗೃತಿ ಕಾರ್ಯಕ್ರಮ ನಡೆಸಲಾಯ್ತು. ತಂಬಾಕು ಜಾಗೃತಿ ಅಭಿಯಾನಕ್ಕೆ ಆಟೋಗಳ ಮೇಲೆ ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವ ಬ್ಯಾನರ್ ಹಾಕಿ ಜಾಗೃತಿ ಮೂಡಿಸಲಾಯ್ತು. ಇನ್ನು ಯುವ ಸಮುದಾಯ ಸೇರಿದಂತೆ ಹಲವರು ತಂಬಾಕಿಗೆ ದಾಸರಾಗ್ತಿದ್ದು, ಇದನ್ನು ತಡೆಗಟ್ಟುವ ಸಲುವಾಗಿ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶ ದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು .