ಬಿ. ಸಿ.ನಾಗೇಶ್ ಅವಿವೇಕಿ - ಮಾಜಿ ಸಿಎಂ ಸಿದ್ದರಾಮಯ್ಯ
ಶಿಕ್ಷಣ ವಿರೋಧಿಯಾದ ಸಚಿವ ಬಿಸಿ ನಾಗೇಶ್ ರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಸರ್ಕಾರಿ ಶಾಲಾ ಮಕ್ಕಳಿಂದ ಶೂ-ಸಾಕ್ಸ್‌ಗಳನ್ನೂ ಕಿತ್ತುಕೊಳ್ಳಲು ಹೊರಟಿದ್ದ ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಡುತ್ತಿರುವ ಎಡವಟ್ಟುಗಳು ಒಂದೋ,ಎರಡೋ? ಮೊದಲು ಈ ಶಿಕ್ಷಣ ವಿರೋಧಿಯನ್ನು ಸಂಪುಟದಿಂದ ಕಿತ್ತು ಹಾಕಿ. ಇಂತಹ ಬೇಜವಬ್ದಾರಿ ಹಾಗೂ ನಾಲಾಯಕ್ ಸಚಿವರು ನಮಗೆ ಅವಶ್ಯಕತೆ ಇಲ್ಲ. ಮಕ್ಕಳ ಜೀವನದ ಜೊತೆ ಚೆಲ್ಲಾಟ ಆಡುವ ಇಂತಹ ಸಚಿವರನ್ನು ಕೂಡಲೇ ವಜಾ ಮಾಡಿ ಎಂದು ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.