3ತಿಂಗ್ಳ ಬಳಿಕ ಬಿ.ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು

Sampriya

ಸೋಮವಾರ, 14 ಅಕ್ಟೋಬರ್ 2024 (17:35 IST)
Photo Courtesy X
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ಹಗರಣ ಕೇಸ್‌ನಲ್ಲಿ ಬಂಧಿತವಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಸಿಟಿ ಸಿವಿಲ್ ನ್ಯಾಯಾಲಯ  ಷರತ್ತು ಬದ್ಧ ಜಾಮೀನು ನೀಡಿದೆ. 2 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇರೆಗೆ ಇದೀಗ ಬಿ ನಾಗೇಂದ್ರಗೆ ಜಾಮೀನು ನೀಡಿದೆ.  

ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ:

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಬೆಂಗಳೂರಿನ ಜನಪ್ರತಿನಿಗಳ ವಿಶೇಷ ನ್ಯಾಯಾಲಯಕ್ಕೆ 24 ಮಂದಿ ಆರೋಪಿಗಳ ವಿರುದ್ಧದ ದೋಷರೋಪ ಪಟ್ಟಿಯನ್ನು ಅ.5ರಂದು ಸಲ್ಲಿಕೆ ಮಾಡಿತ್ತು. ಚಾರ್ಜ್‌ಶೀಟ್‌ನಲ್ಲಿ ನಾಗೇಂದ್ರನೇ ಈ ಪ್ರಕರಣದ ಮಾಸ್ಟರ್‌ಮೈಂಡ್ ಎಂದು ಉಲ್ಲೇಖ ಮಾಡಲಾಗಿತ್ತು.


 ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್‌ರಾವ್, ನೆಕ್ಕಂಟಿ ನಾಗರಾಜ್, ವಿಜಯ್‌ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು. ಮೇ 2024 ರಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದು, ಇಡೀ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ