ನಾನು, ಯಡಿಯೂರಪ್ಪ ಅಣ್ಣ-ತಮ್ಮಂದಿರಂತೆ: ಯೂಟರ್ನ್ ಹೊಡೆದ ಈಶ್ವರಪ್ಪ

ಬುಧವಾರ, 18 ಜನವರಿ 2017 (19:21 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ನಾನು ಅಣ್ಣ-ತಮ್ಮಂದಿರಂತೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಯೂಟರ್ನ್ ಹೊಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹಾಗೂ ಬಿ.ಎಸ್.ಯಡಿಯೂರಪ್ಪ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಯಣ್ಣ ಬ್ರಿಗೇಡ್ ಮುಂದುವರೆಯುತ್ತೇ ಎಂದು ಸ್ಪಷ್ಟಪಡಿಸಿದರು.
 
ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ಅಸಮಾಧಾನ ಇದೆ. ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಬಿಜೆಪಿ ತತ್ವದ ಬಗ್ಗೆ ಗೊತ್ತಿಲ್ಲ. ಧೀನ ದಯಾಳ ಯಾರು ಎನ್ನುವುದೆ ಗೊತ್ತಿಲ್ಲ. ಅಂಥವರನ್ನು ಪದಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಪದಾಧಿಕಾರಿಗಳ ನೇಮಕ ಬದಲಾವಣೆ ಮಾಡಲೇ ಬೇಕು ಎಂದು ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ