ಕಲ್ಯಾಣ ಕರ್ನಾಟಕದಲ್ಲಿ ವಿಮಾನ ಹಾರಿಸಿದ ಬಿ.ಎಸ್. ಯಡಿಯೂರಪ್ಪ

ಶುಕ್ರವಾರ, 22 ನವೆಂಬರ್ 2019 (18:27 IST)
ಕಲ್ಯಾಣ ಕರ್ನಾಟಕದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ರಾಜ್ಯದ ಈಶಾನ್ಯ ಭಾಗವು ವಿಮಾನಯಾನ ಸಂಪರ್ಕಕ್ಕೆ ಬಂದಿರುವುದರಿಂದ ದೇಶ, ವಿದೇಶದಿಂದ ಉದ್ಯಮಿಗಳು ಇಲ್ಲಿ ಹಣ ಹೂಡಿಕೆ ಮಾಡಲಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಈ ವಿಮಾನ ನಿಲ್ದಾಣ ಹೊಸ ಅಧ್ಯಾಯ ನಿರ್ಮಿಸಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ರು.

ಕಲಬುರಗಿ ವಿಮಾನ ನಿಲ್ದಾಣ ಆವರಣದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ, ಏರ್‍ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಹಾಗೂ ಕರ್ನಾಟಕ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಜಂಟಿಯಾಗಿ ಆಯೋಜಿಸಿದ್ದ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿದ್ರು.

ನಮ್ಮ ಸರ್ಕಾರ ಬಂದ ಕೂಡಲೆ ಇಲ್ಲಿನ ಜನರ ಆಸೆಗೆ ಅನುಗುಣವಾಗಿ ಪ್ರದೇಶಕ್ಕೆ ದಾಸ್ಯ ಪದವಾಗಿದ್ದ “ಹೈದ್ರಾಬಾದ ಕರ್ನಾಟಕ” ಎಂಬುದನ್ನು “ಕಲ್ಯಾಣ ಕರ್ನಾಟಕ” ಎಂದು ಮರುನಾಮಕರಣ ಮಾಡಲಾಯಿತು. 2008ರಲ್ಲಿ ನನ್ನಿಂದಲೆ ಅಡಿಗಲ್ಲು ಹಾಕಿದ ಕಲಬುರಗಿ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆ ಮಾಡುತ್ತಿದ್ದು, ಯಾವುದೋ ಜನ್ಮದ ಪುಣ್ಯದ ಫಲವಾಗಿದೆ ಎಂದರು.
 742-23 ಎಕರೆ ಪ್ರದೇಶದಲ್ಲಿ ರಾಜ್ಯ ಸರ್ಕಾರವೆ ಸಂಪೂರ್ಣವಾಗಿ ಅಭಿವೃದ್ಧಿಪಡಿಸಿರುವ ಕಲಬುರಗಿಯ ಹಸಿರು ವಿಮಾನ ನಿಲ್ದಾಣಕ್ಕೆ ಇಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು 58.52 ಕೋಟಿ ರೂ. ಅನುದಾನ ನೀಡುವುದರ ಮೂಲಕ ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಅದು ಶ್ರಮಿಸುತ್ತಿದೆ.

3.175 ಕಿ.ಮಿ. ಉದ್ದದ ರನ್ವೆ ಹೊಂದಿರುವ ಕಲಬುರಗಿ ವಿಮಾನ ನಿಲ್ದಾಣ ರಾಜ್ಯದ 2ನೇ ಹಾಗೂ ದೇಶದ 10ನೇ ಅತಿ ಉದ್ದದ ರನ್ ವೇ ಇದಾಗಿದೆ. ದೇಶಕ್ಕೆ ಶೇ.30ರಷ್ಟು ತೊಗರಿ ಉತ್ಪಾದಿಸುವ ಮತ್ತು ಸಿಮೆಂಟ್ ರಫ್ತಿನಿಂದಲೆ ಕಲಬುರಗಿ ಜಿಲ್ಲೆ ವಿಶ್ವದಾದ್ಯಂತ ಗಮನ ಸೆಳೆದಿದೆ. ಹೀಗಾಗಿ ಇಲ್ಲಿನ ವಿಮಾನ ನಿಲ್ದಾಣವನ್ನು ಭವಿಷ್ಯದಲ್ಲಿ  ಸರಕು ಸಾಗಣೆಗೂ ಬಳಸಿಕೊಳ್ಳುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ