ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಬಿ ಶ್ರೀರಾಮುಲು

Krishnaveni K

ಬುಧವಾರ, 5 ಫೆಬ್ರವರಿ 2025 (20:14 IST)
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಮತ್ತಷ್ಟು ಜೋರಾಗುತ್ತಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ಶ್ರೀರಾಮುಲು ಟವೆಲ್ ಹಾಕಿದ್ದಾರೆ.

ಇತ್ತೀಚೆಗಷ್ಟೇ ಶ್ರೀರಾಮುಲು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸಿಡಿದೆದ್ದು ಪಕ್ಷ ಬಿಡುವ ಬೆದರಿಕೆ ಹಾಕಿದ್ದರು. ಬಳಿಕ ಹೈಕಮಾಂಡ್ ಮಧ್ಯಪ್ರವೇಶಿಸಿ ಶ್ರೀರಾಮುಲು ಕೋಪ ಶಮನಗೊಳಿಸಿತ್ತು. ಆದರೂ ತಮ್ಮ ಗೆಳೆಯ ಜನಾರ್ಧನ ರೆಡ್ಡಿ ಮೇಲೆ ಶ್ರೀರಾಮುಲು ಮುನಿಸು ಮುಂದುವರಿದಿದೆ.

ಈ ನಡುವೆ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ್ದಾರೆ. ಈಗಾಗಲೇ ಬಸನಗೌಡಪಾಟೀಲ್ ಯತ್ನಾಳ್ ಮತ್ತು ಅವರ ಬಣ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಅದಕ್ಕೀಗ ಶ್ರೀರಾಮುಲು ಕೂಡಾ ಸೇರ್ಪಡೆಯಾಗಿದ್ದಾರೆ.

ರಾಜ್ಯಾಧ್ಯಕ್ಷ ಪಟ್ಟ ಕೊಟ್ಟರೆ ಬೇಡ ಎನ್ನಲ್ಲ. ನಾನೂ ಕೂಡಾ ಯತ್ನಾಳ್ ಸಮಕಾಲೀನ. ಒಂದು ವೇಳೆ ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿದರೆ ರಾಜ್ಯದಲ್ಲಿ150 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಿ ಮತ್ತೆ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದಿದ್ದಾರೆ. ಒಟ್ಟಿನಲ್ಲಿ ಹೈಕಮಾಂಡ್ ಗೆ ಈಗ ಯಾರನ್ನು ಅಧ್ಯಕ್ಷರನ್ನಾಗಿ ಮಾಡುವುದು ಎಂಬುದೇ ದೊಡ್ಡ ತಲೆನೋವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ