ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿಯೂ ವ್ಯರ್ಥ: ಸಿಎಂ ಸಿದ್ದರಾಮಯ್ಯ ಟೀಕೆ

Sampriya

ಗುರುವಾರ, 2 ಮೇ 2024 (17:38 IST)
Photo Courtesy X
ಶಿವಮೊಗ್ಗ: ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಅವರು ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಗೆಲುವನ್ನು ಖಚಿತಪಡಿಸಿ ಮಾತನಾಡಿದರು.

ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ರಾಜ್ಯದ ಪರವಾಗಿ, ಜಿಲ್ಲೆಯ ಪರವಾಗಿ ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್ . ಬಿಜೆಪಿಯಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಜಿಲ್ಕೆಗಾಗಲಿ ಏನೇನೂ ಪ್ರಯೋಜನವಿಲ್ಲ ಎಂದರು.

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಇರುವ ಮೋದಿ ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು ತೋರಿ ದೊಡ್ಡ ಅನ್ಯಾಯ ಮಾಡುತ್ತಿದೆ. ಪ್ರವಾಹ ಅಥವಾ ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ ಸುಖ ಕೇಳುವ ಪ್ರಯತ್ನವನ್ನೂ ಮೋದಿ ಮಾಡಲೇ ಇಲ್ಲ ಎಂದರು.

ಬಿಜೆಪಿ, ಬಡವರು, ರೈತರ , ಮಹಿಳೆಯರ ವಿರುದ್ಧವಾಗಿರುವ ಸರ್ಕಾರ: 10 ವರ್ಷಗಳಲ್ಲಿ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. 15 ಲಕ್ಷ ಕಪ್ಪು ಹಣ ತರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ. ಅಚ್ಚೇ ದಿನ್ ಬರಲಿಲ್ಲ. ದೇಶ ಹಾಗೂ ರಾಜ್ಯದ ಜನ ಬೆಲೆಯೇರಿಕೆ, ಹಣದುಬ್ಬರ ಜಾಸ್ತಿಯಾದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲ ಮನ್ನಾ ಮಾಡಿ, ನ್ಯಾಯಯುತ ಬೆಲೆ ಕೊಡಿ, ಎಂ.ಎಸ್.ಪಿ ಗೆ ಕಾನೂನು ರೂಪಿಸಿ ಎಂದು ಹೋರಾಟ ಮಾಡಿದರೂ ನರೇಂದ್ರ ಮೋದಿ ಜಗ್ಗಲಿಲ್ಲ.

 ಬಿಜೆಪಿ, ಬಡವರು, ರೈತರ , ಮಹಿಳೆಯರ ವಿರುದ್ಧವಾಗಿರುವ ಸರ್ಕಾರ. ಆದ್ದರಿಂದಲೇ ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ