ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸಾರಥ್ಯ
ಇದರೊಂದಿಗೆ ಮತ್ತೆ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮೇಲುಗೈ ಸಾಧಿಸಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಿದ್ದಾರೆ.
ಚುನಾವಣೆ ಮುಗಿದು ಇಷ್ಟು ದಿನವಾಗಿದ್ದರೂ ಬಿಜೆಪಿಗೆ ನೂತನ ಅಧ್ಯಕ್ಷರ ನೇಮಕವಾಗಿಲ್ಲ ಎಂಬ ವಿಚಾರಕ್ಕೆ ಕಾಂಗ್ರೆಸ್ ಆಗಾಗ ಬಿಜೆಪಿಗೆ ಟಾಂಗ್ ಕೊಡುತ್ತಲೇ ಇತ್ತು. ಸ್ವತಃ ಬಿಜೆಪಿಯಲ್ಲೇ ಈ ಬಗ್ಗೆ ಅಸಮಾಧಾನಗಳಿದ್ದವು. ಇದೀಗ ಕೊನೆಗೂ ನೂತನ ಅಧ್ಯಕ್ಷರ ಆಯ್ಕೆಯಾಗಿದೆ. ಈ ಮೊದಲು ಈ ಹುದ್ದೆಗೆ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸಿ.ಟಿ. ರವಿ ಹೆಸರು ಕೇಳಿಬಂದಿತ್ತು. ಅಂತಿಮವಾಗಿ ಲಿಂಗಾಯಿತರ ಮತ ಸೆಳೆಯುವ ಉದ್ದೇಶದಿಂದ ಬಿಜೆಪಿ ಹೈಕಮಾಂಡ್ ವಿಜಯೇಂದ್ರಗೆ ಮಣೆ ಹಾಕಿದೆ.