ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಒಳಬೇಗುದಿ ಹೆಚ್ಚಾಗುತ್ತಿದ್ದು, ಹಾಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಅಸಮಾಧಾನ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಶೀಘ್ರದಲ್ಲೇ ಅವರ ತಲೆದಂಡವಾದರೂ ಅಚ್ಚರಿಯಿಲ್ಲ.
ಬಿ ವೈ ವಿಜಯೇಂದ್ರ ವಿರುದ್ಧ ಉತ್ತರ ಕರ್ನಾಟಕದ ಕೆಲವು ಶಾಸಕರಲ್ಲಿ ಅಸಮಾಧಾನವಿದೆ. ಮೈಸೂರು ಚಲೋ ಪಾದಯಾತ್ರೆಯಿಂದ ಅಂತರ ಕಾಯ್ದುಕೊಂಡಿದ್ದ ಕೆಲವು ಬಿಜೆಪಿ ನಾಯಕರು ಈಗ ಉತ್ತರ ಕರ್ನಾಟಕದಲ್ಲಿ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಕೆಲವು ಶಾಸಕರು ಬಿವೈ ವಿಜಯೇಂದ್ರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಈಗಾಗಲೇ ಬಿಜೆಪಿ ಅಸಮಾಧಾನ ಸರಿಪಡಿಸಲು ಆರ್ ಎಸ್ಎಸ್ ನಾಯಕರು ಕೂಡಾ ಎಂಟ್ರಿ ಕೊಟ್ಟಿದ್ದಾರೆ ಎಂಬ ಮಾತುಗಳಿವೆ. ಈ ನಡುವೆ ದೆಹಲಿ ನಾಯಕರಿಗೆ ಬಿ ವೈ ವಿಜಯೇಂದ್ರ ಬದಲಾವಣೆಗೆ ಒತ್ತಾಯ ಕೇಳಿಬಂದಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಆರ್ ಅಶೋಕ್ ದೆಹಲಿ ನಾಯಕರೇ ವಿಜಯೇಂದ್ರ ಬದಲಾವಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ರಾಜ್ಯ ಬಿಜೆಪಿಯ ವಿದ್ಯಮಾನಗಳ ಬಗ್ಗೆ ದೆಹಲಿ ನಾಯಕರ ಗಮನಕ್ಕೆ ತಂದಿರುವ ಅಶೋಕ್ ಪರಿಹಾರ ಕೊಡಲು ಕೇಳಿಕೊಂಡಿದ್ದಾರಂತೆ.ಹೀಗಾಗಿ ಸದ್ಯದಲ್ಲೇ ವಿಜಯೇಂದ್ರ ತಲೆದಂಡವಾದರೂ ಅಚ್ಚರಿಯಿಲ್ಲ.