ನಳಿನ್ ಕುಮಾರ್ ಕಟೀಲ್ ಅವರದು ಬಚ್ಚಲು ಬಾಯಿ: ಡಿ.ಕೆ. ಶಿವಕುಮಾರ್ ತಿರುಗೇಟು

ಶನಿವಾರ, 21 ಜನವರಿ 2023 (14:00 IST)
ನಳಿನ್ ಕುಮಾರ್ ಕಟೀಲ್ ಅವರ ನಾಲಿಗೆಯಲ್ಲಿ ಮೂಳೆ ಮಾತ್ರವಲ್ಲ, ನಿಯಂತ್ರಣವೂ ಇಲ್ಲ. ನಮ್ಮ ಹಳ್ಳಿ ಕಡೆ ಇಂತಹವರಿಗೆ ಬಚ್ಚಲು ಬಾಯಿ ಅಂತಾರೆ. ಕಟೀಲ್ ಒಂದು ಪಕ್ಷದ ರಾಜ್ಯಾಧ್ಯಕ್ಷರು, ಸಂಸದರು. ಅವರು ಮಾತನಾಡಿದರೆ ಅದಕ್ಕೆ ಸಾಕ್ಷಿ ಇರಬೇಕು.  ಅವರು ಇದುವರೆಗೂ ಮಾತನಾಡಿರುವ ಯಾವುದಾದರೂ ವಿಚಾರದಲ್ಲಿ ಏನಾದರೂ ಸಾಕ್ಷಿ ಇದೆಯಾ?ಎಂದು ಡಿಕೆಶಿ ಕೇಳಿದ್ದಾರೆ. 
 
ಅಲ್ಲದೇ ಕಟೀಲ್ ಅವರು ಮೊದಲು ಯತ್ನಾಳ್, ನಿರಾಣಿ, ವಿಶ್ವನಾಥ್, ಯೋಗೇಶ್ವರ್ ಅವರ ಮಾತಿಗೆ ಉತ್ತರ ನೀಡಲಿ. ಕಟೀಲ್ ಅವರಿಗೆ ಪಕ್ಷದಲ್ಲಿ ಹಿಡಿತವಿಲ್ಲ. ಅವರು ಪಕ್ಷದ ಅಧ್ಯಕ್ಷರು, ನಮ್ಮ ಪಕ್ಷದ ಬಗ್ಗೆ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ನಾನು ಪ್ರತಿಕ್ರಿಯೆ ನೀಡುತ್ತಿದ್ದೇನೆ. ಇಲ್ಲದಿದ್ದರೆ ನನ್ನಂತಹವರ ಪ್ರತಿಕ್ರಿಯೆ ಪಡೆಯಲು ಅವರು ಯೋಗ್ಯರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ