ಕೊರೊನಾ ವೈರಸ್ ಹರಡುವುದನ್ನು ತಡೆಯುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದಾಗಿ ಜುಲೈ 22 ವರೆಗೆ ಜಿಲ್ಲೆಯಲ್ಲಿ ಸಚಿವರು ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.
ಬೀದರ ಜಿಲ್ಲಾದ್ಯಂತ ಜುಲೈ 15 ರಿಂದ ಜುಲೈ 22 ರವರೆ ಲಾಕ್‌ಡೌನ್ ಜಾರಿ ಮಾಡಲಾಗಿದೆ ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲಾಕ್‌ಡೌನ್ ಆದೇಶವನ್ನು ಅಧಿಕೃತವಾಗಿ ಪ್ರಕಟಿಸಿದ ಸಚಿವರು, ಬೀದರ ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಹಾಗೂ ಸಾವಿನ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಹೆಚ್ಚುತ್ತಿವೆ.
ಹೀಗಾಗಿ ಬೀದರ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಅನುಮತಿ ನೀಡಬೇಕು ಎಂದು ಜುಲೈ 13ರಂದು ನಡೆದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿ ಅನುಮತಿ ಪಡೆದುಕೊಂಡಿದ್ದಾಗಿ ಹೇಳಿದರು.
ಆ ಬಳಿಕ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಅಭಿಪ್ರಾಯ ಕೇಳಿದಾಗ, ಬೀದರ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿ ಮಾಡಲೇಬೇಕು ಎಂದು ಎಲ್ಲರೂ ಒಮ್ಮತದ ಅಭಿಪ್ರಾಯ ನೀಡಿದ್ದರಿಂದ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.