ಬಾಗಲಕೋಟೆ ರೆಡ್ ಝೋನ್ ಪಟ್ಟಿಗೆ ಸೇರಿದ ಹಿನ್ನಲೆ; ಜಿಲ್ಲೆಯಾದ್ಯಂತ ತೀವ್ರ ಕಟ್ಟೆಚ್ಚರ

ಗುರುವಾರ, 16 ಏಪ್ರಿಲ್ 2020 (10:31 IST)
ಬಾಗಲಕೋಟೆ : ಬಾಗಲಕೋಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ.


ಬಾಗಲಕೋಟೆಯಲ್ಲಿ  ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಆದಕಾರಣ ಕೇಂದ್ರ ರಿಲೀಸ್ ಮಾಡಿದ ಪಟ್ಟಿಯಲ್ಲಿ ಬಾಗಲಕೋಟೆಯನ್ನು ರೆಡ್ ಝೋನ್ ಗೆ ಸೇರಿಸಲಾಗಿದೆ.

ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲೆಡೆ ಜಿಲ್ಲಾಡಳಿತ ತೀವ್ರ ಕಟ್ಟೆಚ್ಚರ ವಹಿಸಿದೆ. ನಗರದ ಪ್ರಮುಖ ರಸ್ತೆಗಳನ್ನು ಪೊಲೀಸರು ಮುಚ್ಚಿದ್ದಾರೆ. ಮುಳ್ಳಿನ ಬೇಲಿ, ಬ್ಯಾರಿಕೇಡ್ ಹಾಕಿ ರಸ್ತೆಗಳು ಬ್ಲಾಕ್ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ