ನಾಡಪ್ರಭು ಕೆಂಪೇಗೌಡರ ಜಯಂತೋತ್ಸವದ ಹಿನ್ನಲೆ; 108 ಅಡಿ ಎತ್ತರದ ಕಂಚಿನ ಪ್ರತಿಮೆಗೆ ಅಡಿಗಲ್ಲು

ಶನಿವಾರ, 27 ಜೂನ್ 2020 (09:28 IST)
ಬೆಂಗಳೂರು : ನಾಡಪ್ರಭು ಕೆಂಪೇಗೌಡರ 501ನೇ ಜಯಂತೋತ್ಸವದ ಹಿನ್ನಲೆಯಲ್ಲಿ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಂಪೇಗೌಡರ ಬೃಹತ್ ಪ್ರತಿಮೆಗೆ ಅಡಿಗಲ್ಲು ಹಾಕಲಾಗುವುದು.

ಬೆಳಿಗ್ಗೆ 10.30ಕ್ಕೆ ಸಿಎಂ ಯಡಿಯೂರಪ್ಪ ಭೂಮಿ ಪೂಜೆ ಮಾಡಲಿದ್ದು, 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಅಡಿಗಲ್ಲು ಹಾಕಲಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸೆಂಟ್ರಲ್ ಥೀಮ್ ಪಾರ್ಕ್ ಗೆ ಭೂಮಿ ಪೂಜೆ ಮಾಡಲಿದ್ದು, ಕಾರ್ಯಕ್ರಮದಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ, ಸಚಿವ ಆರ್.ಅಶೋಕ್ ಸೇರಿ ಹಲವರು ಭಾಗಿಯಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ