ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಸೋಮವಾರ, 4 ಅಕ್ಟೋಬರ್ 2021 (21:14 IST)
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಆರಂಭವಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಅಕ್ಟೋಬರ್ 6ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ.
 
 
ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಿದೆ. ಆದರೆ ಚಂಡಮಾರುತದ ಪ್ರಭಾವದಿಂದ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ. ಅಕ್ಟೋಬರ್ 5 ಮತ್ತು 6ರಂದು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 
 
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಅಕ್ಟೋಬರ್ 6ರವರೆಗೂ ರಾಜ್ಯದಲ್ಲಿ ಅಧಿಕ ಮಳೆ ಸೂಚನೆ
ಅಕ್ಟೋಬರ್ 6ರ ನಂತರ ಮುಂಗಾರು ಅಂತ್ಯವಾಗಲಿದೆ. 
 
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದಾಗಿ ಅಕ್ಟೋಬರ್ 4ರಿಂದ ಆರಂಭಗೊಂಡು ಅಕ್ಟೋಬರ್ 5, 6ರಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಮಂಗಳವಾರ ಹಾಗೂ ಬುಧವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 
 
ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಯಲ್ಲಿ ಸೋಮವಾರ ಸಾಧಾರಣ ಮಳೆಯಾಗುವುದಾಗಿ ಮುನ್ಸೂಚನೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ