ಬಾಗಲುಗುಂಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ ಜಾನವರು ವಶ

ಶುಕ್ರವಾರ, 1 ಏಪ್ರಿಲ್ 2022 (18:13 IST)
ವಾಹನದಲ್ಲಿ ಹಸುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಾಗಲಗುಂಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 4 ಹಸು, ಒಂದು ಹೋರಿಯನ್ನು ವಶಕ್ಕೆ ಪಡೆದು ಒಬ್ಬನನ್ನು ಬಂಧಿಸಿದ್ದಾರೆ.
ಮಾಗಡಿ ತಾಲ್ಲೂಕಿನಿಂದ ಬೆಂಗಳೂರು ನಗರಕ್ಕೆ ಬುಲೆರೋ ವಾಹನದಲ್ಲಿ ಹಸುಗಳನ್ನು ಸಾಗಿಸುತ್ತಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.
ತಕ್ಷಣ ಪೊಲೀಸರು ವಾಹನ ಬರುತ್ತಿದ್ದ ಮಾರ್ಗದಲ್ಲಿ ಕಾರ್ಯಪ್ರವೃತ್ತರಾಗಿ ವಾಹನ ಅಡ್ಡಗಟ್ಟಿ ಪರಿಶೀಲಿಸಿದಾಗ ಹಸುಗಳು ಇರುವುದು ಕಂಡ ಬಂದ ಹಿನ್ನೆಲೆಯಲ್ಲಿ ಅವುಗಳನ್ನು ವಶಕ್ಕೆ ಪಡೆದು ವಾಹನದ ಚಾಲಕನನ್ನು ಬಂಧಿಸಿದ್ದಾರೆ.
 
ಮಾಲೀಕ ಯಾರೆಂಬ ಬಗ್ಗೆ ಸದ್ಯಕ್ಕೆ ತಿಳಿದುಬಂದಿಲ್ಲ. ಪ್ರಕರಣ ದಾಖಳಿಲಿಸಿಕೊಂಡಿರುವ ಬಾಗಲಗುಂಟೆ ಠಾಣೆ ಪೊಲೀಸರು ಮಾಲೀಕನಿಗಾಗಿ ಶೋಧ ಕೈಗೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ